ಬೆಂಗಳೂರು: ಅಂತುಇಂತೂ ಪೆನ್ಡ್ರೈವ್ ಕೇಸಲ್ಲಿ ಪ್ರಜ್ವಲ್ ರೇವಣ್ಣ ಬಂಧನವಾಗಿದೆ. ಮಧ್ಯರಾತ್ರಿ ಪ್ರಜ್ವಲ್ ರೇವಣ್ಣರನ್ನು ಬಂಧಿಸಲು ಮಹಿಳಾ ಅಧಿಕಾರಿಗಳನ್ನು ಕಳುಹಿಸಲಾಗಿತ್ತು. ಆದರೆ ಮಹಿಳಾ ಪೊಲೀಸರಿಂದಲೇ ಬಂಧಿಸಿದ್ದು ಯಾಕೆ ಎಂಬುದು ಇದೀಗ ಕುತೂಹಲಕ್ಕೆ ಕಾರಣವಾಗಿದೆ.ಏರ್ಪೋರ್ಟ್ನಲ್ಲಿ ಮೂವರು ಮಹಿಳಾ ಅಧಿಕಾರಿಗಳಿಂದಲೇ ಪ್ರಜ್ವಲ್ ಅರೆಸ್ಟ್ ಮಾಡಿಸಿದ್ದಾರೆ ಎಸ್ಐಟಿ ಅಧಿಕಾರಿಗಳು.
ಜೀಪ್ ಚಾಲಕ ಹೊರತುಪಡಿಸಿದ್ರೆ ಉಳಿದವರೆಲ್ಲ ಮಹಿಳಾ ಅಧಿಕಾರಿಗಳೇ ಇದ್ದರು. ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತ ಮಹಿಳೆಯರು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಹೆಣ್ಣನ್ನು ಕೇವಲವಾಗಿ ನೋಡಿದ ಪ್ರಜ್ವಲ್ಗೆ ಮುಜುಗರವಾಗಲಿ, ನಾಚಿಕೆಪಡುವಂತಾಗಲಿ ಎಂದು ಮಹಿಳಾ ಅಧಿಕಾರಿಗಳಿಂದಲೇ ಅರೆಸ್ಟ್ ಮಾಡಿಸಿದೆ ಎನ್ನಲಾಗಿದೆ.
ಎಸ್ಐಟಿ ಆ ಮೂಲಕ ಹೆಣ್ಣು ಅಬಲೆಯಲ್ಲ, ನಾವಿದ್ದೇವೆ ಧೈರ್ಯವಾಗಿ ಬಂದು ದೂರು ನೀಡುವಂತೆ ಸಂತ್ರಸ್ತ ಮಹಿಳೆಯರಿಗೆ ಧೈರ್ಯ ತುಂಬುವ ಸಂದೇಶ ರವಾನಿಸಿದೆ. ಸದ್ಯ ಒಂದೇ ಕಲ್ಲಲ್ಲಿ ಎರಡು ಹಕ್ಕಿ ಹೊಡೆಯುವ ಪ್ಲಾನ್ ಮಾ ಮಾಡಿಸಿ ಎಸ್ ಐಟಿ ಸಕ್ಸಸ್ ಆಗಿದ್ದು, ಮುಂದಿನ ದಿನಮಾನಗಳಲ್ಲಿ ಮತ್ತಷ್ಟು ಸಂತ್ರಸ್ಥೆಯರು ಪ್ರಜ್ವಲ್ ವಿರುದ್ಧ ದೂರು ನೀಡಲು ಬರ್ತಾರ ಎಂಬುದನ್ನು ಕಾದು ನೋಡಬೇಕಿದೆ.