ಬೆಂಗಳೂರು: ಪ್ಯಾನ್ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಲು ಕೇಂದ್ರ ಸರ್ಕಾರ ನೀಡಿದ್ದ ಗಡುವು ಮುಗಿಯುತ್ತಾ ಬರ್ತಿದೆ. ದೇಶದ ನಾಗರಿಕರು ಇವತ್ತು ಆನ್ಲೈನ್ ಮೂಲಕ 1000 ರೂಪಾಯಿ ಪಾವತಿಸಿ ತಮ್ಮ ಆಧಾರ್ ಕಾರ್ಡ್ ಅನ್ನು ತಮ್ಮ ಪ್ಯಾನ್ಗೆ ಲಿಂಕ್ ಮಾಡಲು ಅವಕಾಶವಿದೆ. ಆದಾಯ ತೆರಿಗೆ ಇಲಾಖೆ ತೆರಿಗೆದಾರರಿಗೆ ಮಹತ್ವದ ಸಲಹೆ ನೀಡಿದೆ. ಆಧಾರ್ ಮತ್ತು ಪ್ಯಾನ್ ಲಿಂಕ್ ಅನ್ನು ಮೇ 31 ರ ಗಡುವಿನೊಳಗೆ ಪೂರ್ಣಗೊಳಿಸಬೇಕು. ಇಲ್ಲದಿದ್ದರೆ ಹೆಚ್ಚಿನ ಟಿಡಿಎಸ್ ಪಾವತಿಸಬೇಕಾಗುತ್ತದೆ ಎಂದು ತನ್ನ ಅಧಿಕೃತ ಎಕ್ಸ್ (ಟ್ವಿಟ್ಟರ್) ಟ್ವೀಟ್ ಮಾಡಿದೆ.
ಮತ್ತೊಂದು ಬಿಗ್ ಅಪ್ಡೇಟ್.! LPG ಸಿಲಿಂಡರ್ ಸಬ್ಸಿಡಿ ಹಣ ಪಡೆಯಲು ಜೂನ್ 1 ರೊಳಗೆ ಈ ಕೆಲಸ ಕಡ್ಡಾಯ!
ಹೀಗಾಗಿ ಎಲ್ಲಾ ತೆರಿಗೆ ಪಾವತಿದಾರರು ಮೇ 31 ರೊಳಗೆ ಆಧಾರ್-ಪ್ಯಾನ್ ಲಿಂಕ್ ಅನ್ನು ಪೂರ್ಣಗೊಳಿಸ ಬೇಕಿದೆ. ಮೇ 31 ರೊಳಗೆ ಪ್ಯಾನ್ ಅನ್ನು ಆಧಾರ್ನೊಂದಿಗೆ ಲಿಂಕ್ ಮಾಡದಿದ್ದರೆ, ತೆರಿಗೆದಾರರು ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 206 ಎಎ ಮತ್ತು 206 ಸಿಸಿ ಅಡಿಯಲ್ಲಿ ಹೆಚ್ಚಿನ ತೆರಿಗೆ ಅಥವಾ ಟಿಡಿಎಸ್ ಪಾವತಿಸಬೇಕಾಗುತ್ತದೆ ಎಂದು ಐಟಿ ಇಲಾಖೆ ಹೇಳಿದೆ. ಪ್ಯಾನ್ ಕಾರ್ಡ್ ಅನ್ನು ಆಧಾರ್ನೊಂದಿಗೆ ಲಿಂಕ್ ಮಾಡದಿದ್ದರೆ ಅದು ಕಾರ್ಯನಿರ್ವಹಿಸುವುದಿಲ್ಲ,
ಆದ್ದರಿಂದ ತೆರಿಗೆ ಕಡಿತವು ಹೆಚ್ಚು ಇರುತ್ತದೆ ಎಂದು ಅದು ಪುನರುಚ್ಚರಿಸಿದೆ. ಕೇಂದ್ರೀಯ ನೇರ ತೆರಿಗೆ ಮಂಡಳಿಯು ಏಪ್ರಿಲ್ 23 ರಂದು ಆಧಾರ್-ಪ್ಯಾನ್ ಲಿಂಕ್ ಕುರಿತು ಸುತ್ತೋಲೆ ಹೊರಡಿಸಿದೆ. ಈ ಪ್ರಕ್ರಿಯೆ ಪೂರ್ಣಗೊಳ್ಳದಿದ್ದರೆ ತೆರಿಗೆದಾರರು ಬೆಲೆ ತೆರಬೇಕಾಗುತ್ತದೆ ಎಂದು ಹೇಳಿದೆ. ಇದೀಗ ಮೂರು ದಿನಗಳಲ್ಲಿ ಗಡುವು ಮುಕ್ತಾಯವಾಗುತ್ತಿದ್ದು, ಆದಾಯ ತೆರಿಗೆ ಇಲಾಖೆ ಮತ್ತೊಮ್ಮೆ ತೆರಿಗೆದಾರರಿಗೆ ಇದನ್ನು ನೆನಪಿಸಿ ಎಚ್ಚರಿಕೆ ನೀಡಿದೆ.
ಆಧಾರ್ – ಪ್ಯಾನ್ ಲಿಂಕ್ ಮಾಡುವುದು ಹೇಗೆ?
- ಮೊದಲನೆಯದಾಗಿ, ನೀವು ಆದಾಯ ತೆರಿಗೆ ಇಲಾಖೆಯ ಅಧಿಕೃತ ವೆಬ್ಸೈಟ್ಗೆ (https://www.incometax.gov.in/iec/foportal/) ಲಾಗಿನ್ ಆಗಬೇಕು.
- ಸ್ಕ್ರೀನ್ನ ಎಡಭಾಗದಲ್ಲಿ ಕಾಣಿಸಿಕೊಳ್ಳುವ ಕ್ವಿಕ್ ಲಿಂಕ್ಸ್ ವಿಭಾಗದಲ್ಲಿ ಲಿಂಕ್ ಆಧಾರ್ ಎಂಬ ಆಯ್ಕೆ ಇರುತ್ತದೆ. ಅದರ ಮೇಲೆ ಕ್ಲಿಕ್ ಮಾಡಿ.
- ನಂತರ ಪ್ಯಾನ್ ಸಂಖ್ಯೆ, ಆಧಾರ್ ಸಂಖ್ಯೆಯನ್ನು ನಮೂದಿಸಿ ಮತ್ತು ಮೌಲ್ಯೀಕರಿಸು ಬಟನ್ ಕ್ಲಿಕ್ ಮಾಡಿ.
- ಪ್ಯಾನ್ ಮತ್ತು ಆಧಾರ್ ಕಾರ್ಡ್ನಂತೆ ಹೆಸರು ಮತ್ತು ಮೊಬೈಲ್ ಸಂಖ್ಯೆಯ ವಿವರಗಳನ್ನು ನಮೂದಿಸಿ ಮತ್ತು ಲಿಂಕ್ ಆಧಾರ್ ಬಟನ್ ಕ್ಲಿಕ್ ಮಾಡಿ.
- ನಿಮ್ಮ ಮೊಬೈಲ್ನಲ್ಲಿ ಸ್ವೀಕರಿಸಿದ OTP ಅನ್ನು ನಮೂದಿಸಿ ಮತ್ತು ಮೌಲ್ಯೀಕರಿಸು ಬಟನ್ ಕ್ಲಿಕ್ ಮಾಡಿ. ಆಧಾರ್-ಪ್ಯಾನ್ ಲಿಂಕ್ ಪ್ರಕ್ರಿಯೆಯು ಪೂರ್ಣಗೊಳ್ಳುತ್ತದೆ.
ಆಧಾರ್ ಪ್ಯಾನ್ ಲಿಂಕ್ ಸ್ಟೇಟಸ್ ಚೆಕ್ ಮಾಡುವುದು ಹೇಗೆ?
- ಆಧಾರ್-ಪ್ಯಾನ್ ಲಿಂಕ್ ಮಾಡುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದವರು ಆದಾಯ ತೆರಿಗೆ ಇಲಾಖೆಯ ವೆಬ್ಸೈಟ್ನಲ್ಲಿ ಸ್ಟೇಟಸ್ ಚೆಕ್ ಮಾಡಬಹುದು.
- ಸ್ಕ್ರೀನ್ನ ಎಡಭಾಗದಲ್ಲಿರುವ ಕ್ವಿಕ್ ಲಿಂಕ್ಸ್ ವಿಭಾಗದಲ್ಲಿ ಕಂಡುಬರುವ ಲಿಂಕ್ ಆಧಾರ್ ಸ್ಥಿತಿಯ ಮೇಲೆ ಕ್ಲಿಕ್ ಮಾಡಿ.
- ಆಧಾರ್ ಮತ್ತು ಪ್ಯಾನ್ ವಿವರಗಳನ್ನು ನಮೂದಿಸಿ ಮತ್ತು ಆಧಾರ್ ಸ್ಥಿತಿಯನ್ನು ವೀಕ್ಷಿಸಿ ಲಿಂಕ್ ಅನ್ನು ಕ್ಲಿಕ್ ಮಾಡಿ.
- ನಂತರ ಸ್ಥಿತಿಯನ್ನು ಪ್ರದರ್ಶಿಸಲಾಗುತ್ತದೆ. ಲಿಂಕ್ ಪ್ರಕ್ರಿಯೆಯು ಪೂರ್ಣಗೊಂಡರೆ ಅದು ಯಶಸ್ವಿಯಾಗಿದೆ ಎಂದು ಹೇಳುತ್ತದೆ. ಇಲ್ಲದಿದ್ದರೆ, ಅದು ಪ್ರಕ್ರಿಯೆಯಲ್ಲಿದೆ.