ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿದೇಶಕ್ಕೆ ಪರಾರಿಯಾಗಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಒಂದು ತಿಂಗಳ ಬಳಿಕ ಅರೆಸ್ಟ್ ಮಾಡಲಾಗಿದೆ. ಇನ್ನೂ ಪ್ರಜ್ವಲ್ ರೇವಣ್ಣ ಪರ ವಕೀಲ ಅರುಣ್.ಜಿ ಮೀಡಿಯಾ ಟ್ರಯಲ್ ಹಾಗೂ ತಮ್ಮ ವಿರುದ್ಧ ಅಪಪ್ರಚಾರ ನಡೆಸದಂತೆ ಮನವಿ ಮಾಡಿದ್ದಾರೆ. ಎಸ್ಐಟಿ ವಶದಲ್ಲಿರುವ ಪ್ರಜ್ವಲ್ ರೇವಣ್ಣ ಭೇಟಿಯಾದ ಬಳಿಕ ಅವರು ಮಾತನಾಡಿದರು.ನಾನೊಬ್ಬ ವಕೀಲನಾಗಿ ನನ್ನ ಕೆಲಸವನ್ನು ನ್ಯಾಯಾಲಯದಲ್ಲಿ ಮಾಡುತ್ತಿದ್ದೇನೆ.
ಮತ್ತೊಂದು ಬಿಗ್ ಅಪ್ಡೇಟ್.! LPG ಸಿಲಿಂಡರ್ ಸಬ್ಸಿಡಿ ಹಣ ಪಡೆಯಲು ಜೂನ್ 1 ರೊಳಗೆ ಈ ಕೆಲಸ ಕಡ್ಡಾಯ!
ಮಾಧ್ಯಮದವರೂ ತಮ್ಮ ಕೆಲಸ ಮಾಡಲಿ. ಅದರೆ ಪ್ರಜ್ವಲ್ ಬಗ್ಗೆ ನೆಗೆಟಿವ್ ವಿಚಾರಗಳನ್ನು ವರದಿ ಮಾಡುವುದು ಬೇಡ. ಎಸ್ಐಟಿ ಮುಂದೆ ಶರಣಾಗಿರುವ ಪ್ರಜ್ವಲ್ ತನಿಖೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದ್ದಾರೆ. ಹೊಳೆನರಸೀ ಪುರದಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಪ್ರಜ್ವಲ್ ಅವರನ್ನು ಬಂಧಿಸಲಾಗಿದೆ. ನ್ಯಾಯಾಲಯದ ಪ್ರಕ್ರಿಯೆಗಳನ್ನು ತಿಳಿಸಿದ್ದೇನೆ. ಜಾಮೀನು ಅರ್ಜಿಯ ವಿಚಾರಣೆ ಇಷ್ಟರಲ್ಲೇ ಶುರುವಾಗಲಿದೆ ಎಂದು ತಿಳಿಸಿದರು.