ಪಾಟ್ನಾ:- ಬಿಹಾರದಲ್ಲಿ ಬಿಸಿಲಿನ ತಾಪಕ್ಕೆ ಒಂದೇ ದಿನದಲ್ಲಿ 10 ಚುನಾವಣಾ ಸಿಬ್ಬಂದಿ ಸೇರಿ 14 ಮಂದಿ ಸಾವನ್ನಪ್ಪಿದ ಘಟನೆ ಜರುಗಿದೆ.
ರಾತ್ರಿ ಹೊತ್ತು ನಿಮ್ಮ ಕಾಲುಗಳಲ್ಲಿ ಹೀಗೆ ಆಗುತ್ತಿದ್ಯಾ!?.. ಹಾಗಿದ್ರೆ ಇದು ಶುಗರ್ ಎಂದರ್ಥ!
ಉತ್ತರ ಭಾರತದಲ್ಲಿ ಬಿಸಿಲಿನ ತಾಪ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಹೈ ಅಲರ್ಟ್ ಘೋಷಿಸಲಾಗಿದೆ. ಬಿಹಾರದ ಬಹುತೇಕ ಸ್ಥಳಗಳಲ್ಲಿ 44 ಡಿಗ್ರಿ ತಾಪಮಾನ ದಾಖಲಾಗಿದೆ. ಬಕ್ಸಾರ್ನಲ್ಲಿ ಗುರುವಾರ ದಾಖಲೆಯ 47.1 ಡಿಗ್ರಿ ತಾಪಮಾನ ದಾಖಲಾಗಿತ್ತು.
ರೋಹ್ಟಾಸ್ನಲ್ಲಿ ಮೂವರು ಚುನಾವಣಾ ಅಧಿಕಾರಿಗಳು ಮತ್ತು ಕೈಮೂರ್ ಮತ್ತು ಔರಂಗಾಬಾದ್ ಜಿಲ್ಲೆಗಳಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ. ರಾಜ್ಯದ ವಿವಿಧೆಡೆ ಇನ್ನೂ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಹೇಳಿಕೆ ತಿಳಿಸಿದೆ. ಮೃತರ ಕುಟುಂಬಗಳಿಗೆ ಪರಿಹಾರ ನೀಡುವ ಪ್ರಕ್ರಿಯೆ ಆರಂಭವಾಗಿದೆ.
ಬಿಸಿಗಾಳಿಯಿಂದಾಗಿ ಬಿಹಾರದಲ್ಲಿ ಎಲ್ಲಾ ಶಾಲೆಗಳು, ಕೋಚಿಂಗ್ ಸಂಸ್ಥೆಗಳು ಮತ್ತು ಅಂಗನವಾಡಿ ಕೇಂದ್ರಗಳನ್ನು ಜೂನ್ 8ರವರೆಗೆ ಮುಚ್ಚಲಾಗಿದೆ.
ಒಂದೇ ದಿನದಲ್ಲಿ 14 ಮಂದಿ ಸಾವನ್ನಪ್ಪುವ ಮೂಲಕ ಬಿಸಿಗಾಳಿಯಿಂದ ಬಿಹಾರದಾದ್ಯಂತ ಇದುವರೆಗೂ ಒಟ್ಟು 24 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ರಾಜ್ಯದಲ್ಲಿ ತಾಪಮಾನ 44 ಡಿಗ್ರಿ ಸೆಲ್ಸಿಯಸ್ ಮೀರಿದೆ. ಬಿಹಾರದ ಔರಂಗಾಬಾದ್ ಜಿಲ್ಲೆಯ ಆಸ್ಪತ್ರೆಯಲ್ಲಿ ಕನಿಷ್ಠ 5 ಜನರು ಸಾವನ್ನಪ್ಪಿದ್ದಾರೆ. ಗುರುವಾರ ಕೈಮೂರ್ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಕಾರ್ಮಿಕ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಭೋಜ್ಪುರದ ಅರ್ರಾದಲ್ಲಿ ಮೂರು ಸಾವುಗಳು ವರದಿಯಾಗಿವೆ.