ಬೆಂಗಳೂರು:– ಮೊಬೈಲ್ ಮಂಗಮಾಯ ಆಗಿರುವ ವಿಚಾರವಾಗಿ SIT ಮುಂದೆ ಪ್ರಜ್ವಲ್ ರೇವಣ್ಣ ಮಾಹಿತಿ ನೀಡಿದ್ದಾರೆ.
ಮಹಿಳೆ ಕಿಡ್ನ್ಯಾಪ್ ಕೇಸ್.. ಇಂದು SITಯಿಂದ ಭವಾನಿ ರೇವಣ್ಣ ವಿಚಾರಣೆ!.. ಎಲ್ಲಿದ್ದಾರೆ ಗೌಡ್ರು ಸೊಸೆ!
ಪ್ರಜ್ವಲ್ ರೇವಣ್ಣ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದು, ತಮ್ಮ ಮೊಬೈಲ್ ಕಳೆದುಹೋಗಿದೆ ಎಂದಿದ್ದಾರೆ. ತಮ್ಮ ಮೊಬೈಲ್ ಒಂದು ವರ್ಷದ ಹಿಂದೆಯೇ ಕಳೆದುಹೋಗಿದ್ದು, ಆ ಕುರಿತು ಹೊಳೆನರಸೀಪುರ ಠಾಣೆಯಲ್ಲಿ ಮೊಬೈಲ್ ಕಳ್ಳತನದ ಬಗ್ಗೆ ದೂರು ನೀಡಿರುವುದಾಗಿಯೂ ಹೇಳಿದ್ದಾರೆ.
ಪ್ರಜ್ವಲ್ ಅವರ ವಿಚಾರಣೆ ಮಾಡಿ 161 ಹೇಳಿಕೆಯನ್ನು ಎಸ್ಐಟಿ ದಾಖಲಿಸಿದೆ. ಅದರಲ್ಲಿ ಮೊಬೈಲ್ ಕುರಿತು ದಾಖಲಿಸಿದೆ. ನೀವು ಹೇಳುತ್ತಿರುವ ಮೊಬೈಲ್ ನನ್ನ ಬಳಿ ಇಲ್ಲ. ಕಳೆದ ವರ್ಷವೇ ಫೋನ್ ಕಳೆದು ಹೋಗಿದ್ದು, ಆ ಬಗ್ಗೆ ಹೊಳೆನರಸೀಪುರ ಠಾಣೆಯಲ್ಲಿ ದೂರು ಕೂಡ ನೀಡಿದ್ದೇನೆ ಎಂದು ಪ್ರಜ್ವಲ್ ಹೇಳಿದ್ದಾರೆ. ಈ ಹೇಳಿಕೆ ಸತ್ಯಾಸತ್ಯತೆಯನ್ನು ಎಸ್ಐಟಿ ಪರಿಶೀಲಿಸಲಿದೆ
ನೀವು ತೋರಿಸಿರುವ ವಿಡಿಯೋಗಳಲ್ಲಿ ಇರುವುದು ನಾನಲ್ಲ. ಅವರೆಲ್ಲ ನನಗೆ ಪರಿಚಯ ಅಷ್ಟೇ. ನಾನು ಯಾರನ್ನೂ ಅತ್ಯಾಚಾರ ಮಾಡಿಲ್ಲ. ಅತ್ಯಾಚಾರ ಆರೋಪಗಳಿಗೂ ನನಗೂ ಯಾವ ಸಂಬಂಧವೂ ಇಲ್ಲ. ವಿಡಿಯೋಗಳ ಬಗ್ಗೆ ನಂಗಷ್ಟು ಗೊತ್ತಿಲ್ಲ ಎಂದು ಪ್ರಜ್ವಲ್ ಹೇಳಿದ್ದಾರೆ. ವೈರಲ್ ಆಗಿರುವ ವಿಡಿಯೋಗಳನ್ನು ತೋರಿಸಿ ಪ್ರಶ್ನಿಸಿದಾಗ ಈ ಉತ್ತರ ದೊರೆತಿದೆ. ತನ್ನ ಮೇಲಿರುವ ಎಲ್ಲ ಆರೋಪಗಳನ್ನು ಪ್ರಜ್ವಲ್ ತಳ್ಳಿ ಹಾಕಿದ್ದಾರೆ
ಅಶ್ಲೀಲ ವಿಡಿಯೋಗಳನ್ನು ಚಿತ್ರೀಕರಿಸಿಕೊಂಡಿರುವ ಮೊಬೈಲ್ ಪ್ರಜ್ವಲ್ ವಿರುದ್ಧದ ಪ್ರಕರಣದಲ್ಲಿ ಪ್ರಬಲವಾದ ಸಾಕ್ಷ್ಯವಾಗಿದೆ. ಈ ಮೊಬೈಲ್ ಸಿಕ್ಕಿದರೆ, ಒಂದು ವೇಳೆ ವಿಡಿಯೋಗಳನ್ನು ಅಳಿಸಿದ್ದರೂ ಅದರಿಂದ ರಿಟ್ರೀವ್ ಮಾಡಬಹುದು. ಆದರೆ ಮೊಬೈಲ್ ಸಂಪೂರ್ಣ ನಾಶವಾಗಿದ್ದರೆ, ಯಾವುದೇ ಮೂಲ ರೆಕಾರ್ಡ್ಗಳು ಸಿಗಲಾರದು. ಅದರಿಂದ ಫಾರ್ವರ್ಡ್ ಆಗಿರುವ ವಿಡಿಯೋಗಳು ಸೆಕೆಂಡರಿ ಸಾಕ್ಷ್ಯಗಳೆನಿಸಿಕೊಳ್ಳುತ್ತವೆ. ಹೀಗಾಗಿ ಮೊಬೈಲ್ ಪಡೆಯಲು ಎಸ್ಐಟಿ ಪ್ರಯತ್ನ ನಡೆಸಬೇಕಿದೆ
ಇನ್ನೂ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು 6 ದಿನಗಳ ಕಾಲ ಎಸ್ಐಟಿ ಪೊಲೀಸರ ಕಸ್ಟಡಿಗೆ ನೀಡಲಾಗಿದೆ. ಎಸಿಎಮ್ಎಮ್ ನ್ಯಾಯಾಲಯದ ನ್ಯಾಯಧೀಶ ಎನ್. ಶಿವಕುಮಾರ್ ಈ ಆದೇಶ ಹೊರಡಿಸಿದ್ದಾರೆ. ಬೆಂಗಳೂರಿನ 42ನೇ ಎಸಿಎಮ್ಸಿ ನ್ಯಾಯಾಲಯ ಈ ಆದೇಶ ಹೊರಡಿಸಿದ್ದು ಪ್ರಜ್ವಲ್ ಅವರಿಗೆ ಯಾವುದೇ ಕಿರಕುಗಳ ನೀಡಬಾರದು ಎಂದು ಎಸ್ಐಟಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದೇ ವೇಳೆ ವೈದ್ಯಕೀಯ ಪರೀಕ್ಷೆ ಸೇರಿದಂತೆ ತನಿಖೆಗೆ ಎಲ್ಲ ರೀತಿಯಲ್ಲೂ ಸಹಕಾರ ನೀಡುವಂತೆ ಪ್ರಜ್ವಲ್ ರೇವಣ್ಣ ಅವರಿಗೂ ಸೂಚನೆ ನೀಡಿದ್ದಾರೆ