ಪಾಕ್ ತಂಡದ ನಾಯಕ ಟಿ20 ಕ್ರಿಕೆಟ್ನಲ್ಲಿ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಲಂಡನ್ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧ 4ನೇ ಟಿ20 ಪಂದ್ಯದಲ್ಲಿ ಬಾಬರ್ ಆಝಂ 22 ಎಸೆತಗಳಲ್ಲಿ 36 ರನ್ ಬಾರಿಸಿದ್ದರು. ಈ ಮೂಲಕ ವಿಶ್ವ ದಾಖಲೆ ಮಾಡಿದ್ದಾರೆ.
ವೈದ್ಯರ ನಿರ್ಲಕ್ಷ್ಯಕ್ಕೆ ಮೂವರು ಬಲಿ ಪ್ರಕರಣ.. ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ!
ಈ ಪಂದ್ಯದಲ್ಲಿ 36 ರನ್ ಕಲೆಹಾಕುವುದರೊಂದಿಗೆ ಟಿ20 ಕ್ರಿಕೆಟ್ನಲ್ಲಿ ಇಂಗ್ಲೆಂಡ್ ವಿರುದ್ಧ ಅತೀ ಹೆಚ್ಚು ರನ್ ಬಾರಿಸಿದ ಬ್ಯಾಟರ್ ಎನಿಸಿಕೊಂಡರು. ಇದಕ್ಕೂ ಮುನ್ನ ಈ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿತ್ತು. ಕಿಂಗ್ ಕೊಹ್ಲಿ ಇಂಗ್ಲೆಂಡ್ ವಿರುದ್ಧ ಟಿ20 ಕ್ರಿಕೆಟ್ನಲ್ಲಿ 639 ರನ್ ಬಾರಿಸಿ ದಾಖಲೆ ನಿರ್ಮಿಸಿದ್ದರು. ಇದೀಗ 641 ರನ್ಗಳೊಂದಿಗೆ ಬಾಬರ್ ಆಝಂ ಈ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ
ಇನ್ನು ಈ ಪಂದ್ಯದಲ್ಲಿ ಎರಡಂಕಿ ಮೊತ್ತ ಕಲೆಹಾಕುವುದರೊಂದಿಗೆ ಟಿ20 ಕ್ರಿಕೆಟ್ನಲ್ಲಿ 4 ಸಾವಿರ ರನ್ ಪೂರೈಸಿದ ವಿಶ್ವದ 2ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾದರು. ಇದಕ್ಕೂ ಮುನ್ನ ಈ ದಾಖಲೆ ವಿರಾಟ್ ಕೊಹ್ಲಿ ನಿರ್ಮಿಸಿದ್ದರು
ವಿರಾಟ್ ಕೊಹ್ಲಿ ಕೇವಲ 107 ಟಿ20 ಇನಿಂಗ್ಸ್ಗಳ ಮೂಲಕ ಈ ಸಾಧನೆ ಮಾಡಿದರೆ, ಬಾಬರ್ ಆಝಂ ಈ ದಾಖಲೆ ಬರೆಯಲು 112 ಇನಿಂಗ್ಸ್ಗಳನ್ನು ತೆಗೆದುಕೊಂಡಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ನಲ್ಲಿ 4 ಸಾವಿರಕ್ಕೂ ಅಧಿಕ ರನ್ ಕಲೆಹಾಕಿದ ವಿಶ್ವದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ
ಹಾಗೆಯೇ ಟಿ20 ಕ್ರಿಕೆಟ್ನಲ್ಲಿ ನಾಯಕನಾಗಿ ಅತೀ ಹೆಚ್ಚು ರನ್ ಕಲೆಹಾಕಿದ ದಾಖಲೆ ಕೂಡ ಬಾಬರ್ ಆಝಂ ತಮ್ಮದಾಗಿಸಿಕೊಂಡಿದ್ದಾರೆ.