ಅಹಮದಾಬಾದ್:-2 ಬಸ್ಗಳ ನಡುವೆ ಡಿಕ್ಕಿ ಸಂಭವಿಸಿ ಮೂವರು ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಜನರಿಗೆ ಗಾಯವಾದ ಘಟನೆ ಗುಜರಾತ್ನ ಅರ್ವಾಲಿ ಜಿಲ್ಲೆಯಲ್ಲಿ ಜರುಗಿದೆ.
ಸಕರಿಯಾ ಗ್ರಾಮದ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ರಾಜ್ಯ ಸಾರಿಗೆ ಬಸ್ ಬೈಕ್ಗೆ ಡಿಕ್ಕಿ ಹೊಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕವನ್ನು ಜಿಗಿದು ಹೆದ್ದಾರಿಯ ರಾಂಗ್ ಸೈಡ್ನಲ್ಲಿ ಬಂದು ಐಷಾರಾಮಿ ಬಸ್ಗೆ ಡಿಕ್ಕಿ ಹೊಡೆದಿದೆ. ಪುರಿ (ಒಡಿಶಾ)ದ ಜಗನ್ನಾಥ ದೇವಸ್ಥಾನದಲ್ಲಿ ತೀರ್ಥಯಾತ್ರೆ ಮುಗಿಸಿ ವಡೋದರಾದ ಸಾವ್ಲಿಗೆ ಹಿಂದಿರುಗುತ್ತಿದ್ದ ಪ್ರಯಾಣಿಕರನ್ನು ಐಷಾರಾಮಿ ಬಸ್ ಹೊತ್ತೊಯ್ಯುತ್ತಿತ್ತು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಸಕರಿಯಾ ಗ್ರಾಮದ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಬೆಳಗ್ಗೆ 11 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಎರಡೂ ಬಸ್ಗಳ ಪ್ರಯಾಣಿಕರು ಗಾಯಗೊಂಡಿದ್ದು, ಅವರಲ್ಲಿ ಸುಮಾರು 15ರಿಂದ 20 ಮಂದಿಯನ್ನು ಚಿಕಿತ್ಸೆಗಾಗಿ ನೆರೆಯ ಸಬರ್ಕಾಂತ ಜಿಲ್ಲೆಯ ಹಿಮತ್ನಗರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಳಿದವರಿಗೆ ಮೊಡಸಾದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.