ಹುಬ್ಬಳ್ಳಿ:- ಪ್ರಜ್ವಲ್ ಪ್ರಕರಣ ಕ್ಷಮೆಗೆ ಅರ್ಹರಲ್ಲ ಎಂದು ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
IND V/S PAK: ಭಾರತ- ಪಾಕ್ ಹೈವೋಲ್ಟೋಜ್ ಪಂದ್ಯದ ಟಿಕೆಟ್ ಕೇಳುವವರೇ ಇಲ್ಲ್ವಂತೆ..!.. ಕಾರಣ ಇಲ್ಲಿದೆ !
ಈ ಸಂಬಂಧ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ಕ್ಷಮಿಸಲಾರದಂತಹ ಅಪರಾಧ ಮಾಡಿದ್ದಾರೆ. ಅವರ ಪ್ರಕರಣ ಹೇಸಿಗೆ ಹುಟ್ಟಿಸಿದೆ. ಅವರು ಕ್ಷಮೆಗೆ ಅರ್ಹರಲ್ಲ, ಕ್ಷಮಿಸುವ ಪ್ರಶ್ನೆಯೇ ಇಲ್ಲ ಎಂದರು.
ಪ್ರಜ್ವಲ್ ರೇವಣ್ಣನನ್ನು ಎಸ್ಐಟಿ ಕಷ್ಟಡಿಗೆ ಕೊಟ್ಟಿದ್ದಾರೆ. ಸರಿಯಾದ ರೀತಿಯಲ್ಲಿ ತನಿಖೆ ಆಗಬೇಕು ಇದೊಂದು ಗಂಭೀರ ಪ್ರಕರಣ. ಭಾರತದಂತಹ ದೇಶದಲ್ಲಿ ಮಹಿಳೆಯರನ್ನು ನಾವು ಗೌರವದಿಂದ ಕಾಣುತ್ತೇವೆ. ಈ ರೀತಿಯ ಘಟನೆ ನಡೆದಿರುವುದು ಹೇಸಿಗೆ ಹುಟ್ಟಿಸುವಂತಾಗಿದೆ, ಮನಸ್ಸಿಗೆ ಕಿರಿಕಿರಿ ಆಗುತ್ತಿದೆ. ಇದನ್ನು ಅತ್ಯಂತ ಕಟ್ಟುನಿಟ್ಟಾದ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದ್ದಾರೆ.
ಈ ನಿಟ್ಟಿನಲ್ಲಿ ನ್ಯಾಯಾಂಗ ವ್ಯವಸ್ಥೆ ಸೂಕ್ತ ಕ್ರಮ ಕೈಗೊಳ್ಳಲಿದೆ ಅನ್ನೋ ಭರವಸೆ ಇದೆ. ತ್ವರಿತ ಗತಿಯಲ್ಲಿ ತನಿಖೆ ಮುಗಿಸಿ ಗರಿಷ್ಠ ಶಿಕ್ಷೆ ಕೊಡುವಂತಾಗಬೇಕು ಎಂದು ಒತ್ತಾಯಿಸಿದ್ದಾರೆ.