ಬೆಂಗಳೂರು:- ಲೋಕಾ ಅಖಾಡದ ಕೈಮಾಕ್ಸ್ ಗೆ ಕ್ಷಣಗಣನೆ ಶುರುವಾಗಿದ್ದು, ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮತ ಎಣಿಕೆ ಕೇಂದ್ರ ತಪಾಸಣೆ ನಡೆಸಿದ್ದಾರೆ. ಲೋಕಸಭಾ ಚುನಾವಣೆ-2024ರ ಸಂಬಂಧ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಹಾಗೂ ಅಧಿಕಾರಿಗಳು ಮತ ಎಣಿಕೆ ಕೇಂದ್ರ(ಸ್ಟ್ರಾಂಗ್ ರೂಂ)ಗಳಿಗೆ ಭೇಟಿ ನೀಡಿ ತಪಾಸಣೆ ಮಾಡಿದ್ದಾರೆ.
ಇಂದು ಬೆಳಗ್ಗೆ 10.00ಕ್ಕೆ, ಮೌಂಟ್ ಕಾರ್ಮೆಲ್ ಕಾಲೇಜು, ಮತ ಎಣಿಕೆ ಕೇಂದ್ರಕ್ಕೆ ಭೇಟಿ ನೀಡಿದರು.