ಬೆಂಗಳೂರು:- ಲೋಕಸಭಾ ಫಲಿತಾಂಶ ಪ್ರಕಟವಾಗುವ ಮೊದಲೇ ಬೆಂಗಳೂರು ಗ್ರಾಮಾಂತರ ಬಿಜೆಪಿ ಅಭ್ಯರ್ಥಿ ಡಾ. ಸಿಎನ್ ಮಂಜುನಾಥ್ ಚುನಾವಣಾ ಆಯೋಗಕ್ಕೆ ಒಂದು ಮಹತ್ವದ ಪತ್ರ ಬರೆದಿದ್ದು, ಮತ ಎಣಿಕೆ ಕೇಂದ್ರದಲ್ಲಿ ಅಗತ್ಯ ಭದ್ರತಾ ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಿದ್ದಾರೆ.
ಪ್ಯಾರಿಸ್ನಿಂದ ಮುಂಬೈಗೆ ಬರುತ್ತಿದ್ದ ವಿಸ್ತಾರಾ ವಿಮಾನಕ್ಕೆ ಬಾಂಬ್ ಬೆದರಿಕೆ..!
ಅಲ್ಲದೇ ಕಾಂಗ್ರೆಸ್ ಅಭ್ಯರ್ಥಿ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಈ ಸಲ ಭಾರೀ ಸುದ್ದಿಯಾಗಿದೆ. ಹಾಲಿ ಸಂಸದ ಡಿಕೆ ಸುರೇಶ್ ಅವರನ್ನು ಸೋಲಿಸಲೇಬೇಕು ಎಂದು ಮೈತ್ರಿ ನಾಯಕರು ಖ್ಯಾಯ ಹೃದ್ರೋಗ ತಜ್ಞ ವೈದ್ಯ ಡಾ. ಸಿಎನ್ ಮಂಜುನಾಥ್ ಅವರನ್ನು ಕಣಕ್ಕಿಳಿಸಿದ್ದಾರೆ. ಹೀಗಾಗಿ ಈ ಬಾರಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿದೆ. ಈಗಾಗಲೇ ಏಪ್ರಿಲ್ 26ರಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಚುನಾವಣೆ ನಡೆದಿದ್ದು, ಇದೀಗ ಯಾರು ಗೆಲ್ಲಲಿದ್ದಾರೆ ಎನ್ನುವ ಲೆಕ್ಕಾಚಾರಗಳು ಶುರುವಾಗಿವೆ. ಇದರ ಮಧ್ಯ ಲೋಕಸಭಾ ಚುನಾವಣೆಯ ಚುನಾವಣೋತ್ತರ ಸಮೀಕ್ಷೆಗಳು ಹೊರಬಂದಿದ್ದು, ರಾಜ್ಯದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಗೆಲ್ಲಲಿದೆ ಎಂದು ಭವಿಷ್ಯ ನುಡಿದಿವೆ. ಅದರಲ್ಲೂ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ ಗೆಲ್ಲಲಿದೆ ಎಂದು ಸಮೀಕ್ಷೆಗಳು ಹೇಳುತ್ತಿವೆ.
ಈ ಹಿನ್ನೆಲೆಯಲ್ಲಿ ಅಭ್ಯರ್ಥಿ ಮಂಜುನಾಥ್ ಸೇರಿದಂತೆ ಬಿಜೆಪಿ, ಜೆಡಿಎಸ್ ನಾಯಕರಲ್ಲಿನ ಸಂತಸ ಮನೆ ಮಾಡಿದ್ದು, ಫಲಿತಾಂಶಕ್ಕಾಗಿ ಕಾತರರಿಂದ ಕಾಯುತ್ತಿದ್ದಾರೆ. ಹೀಗಾಗಿ ಮತ ಎಣಿಕೆ ಕೇಂದ್ರದಲ್ಲಿ ಯಾವುದೇ ಗೊಂದಲ, ಗಲಾಟೆಗಳು ಆಗಬಾರದು ಎಂದು ಡಾ ಮಂಜುನಾಥ್ ಅವರು ಮುಂಜಾಗ್ರತಾವಾಗಿ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದು, ಮತ ಎಣಿಕೆ ಕೇಂದ್ರದಲ್ಲಿ ಅಗತ್ಯ ಭದ್ರತಾ ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಿದ್ದಾರೆ.
ಹೆಚ್ಚುವರಿ ಭದ್ರತಾ ಪಡೆಗಳ ನಿಯೋಜನೆ ಮಾಡಬೇಕು.
ಎಣಿಕೆ ಕೇಂದ್ರದ ಸುತ್ತಲೂ ಹೆಚ್ಚುವರಿ ಪೊಲೀಸ್ ಮತ್ತು ಅರೆಸೇನಾ ಪಡೆಗಳ ನಿಯೋಜನೆ ಮಾಡಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಬೇಕು.
ಯಾವುದೇ ವ್ಯಕ್ತಿಯ ಅನಧಿಕೃತ ಪ್ರವೇಶ ಅಥವಾ ಉಲ್ಲಂಘನೆಯ ಪ್ರಯತ್ನಗಳನ್ನು ತಡೆಗಟ್ಟಲು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಬೇಕು.
ಪಕ್ಷದ ಏಜೆಂಟ್ಗಳು ಸೇರಿದಂತೆ ಮತ ಎಣಿಕೆ ಪ್ರದೇಶವನ್ನು ಪ್ರವೇಶಿಸುವ ಎಲ್ಲಾ ವ್ಯಕ್ತಿಗಳನ್ನು ಸಂಪೂರ್ಣವಾಗಿ ತಪಾಸಣೆ ಮಾಡಬೇಕು,
ಅಧಿಕಾರಿಗಳು ಮತ್ತು ಮಾಧ್ಯಮ ಸಿಬ್ಬಂದಿ ಅವರ ಉಪಸ್ಥಿತಿಯು ಅತ್ಯಗತ್ಯವಾಗಿದ್ದು, ಅವರ ಪೂರ್ವ ಅನುಮತಿ ಪಡೆದ ವ್ಯಕ್ತಿಗಳಿಗೆ ಮಾತ್ರ ಅವಕಾಶ ಮಾಡಿಕೊಡಬೇಕು ಎಂದು ಹೇಳಿದ್ದಾರೆ.