ಟೀಂ ಇಂಡಿಯಾ ಆಲ್ರೌಂಡರ್ ವೆಂಕಟೇಶ್ ಅಯ್ಯರ್ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ವೆಂಕಟೇಶ್ ಅಯ್ಯರ್ ಇಂದು ಅಂದರೆ, ಜೂನ್ 2 ರಂದು ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ.
ತಮ್ಮ ಬಹುದಿನದ ಗೆಳತಿ ಶ್ರುತಿ ರಘುನಾಥನ್ ಅವರೊಂದಿಗೆ ಕಳೆದ ವರ್ಷ ನಿಶ್ಚಿತಾರ್ಥ ಮಾಡಿಕೊಂಡಿದ್ದ ವೆಂಕಟೇಶ್ ಅಯ್ಯರ್, ಐಪಿಎಲ್ಗಾಗಿ ತಮ್ಮ ಮದುವೆಯನ್ನು ಮುಂದೂಡಿದ್ದರು. ಆದರೀಗ ತಂಡವನ್ನು ಚಾಂಪಿಯನ್ ಮಾಡಿದ ಬಳಿಕ ಸಪ್ತಪದಿ ತುಳಿದಿದ್ದಾರೆ.
ವೆಂಕಟೇಶ್ ಅಯ್ಯರ್ ಕಳೆದ ವರ್ಷ ನವೆಂಬರ್ ತಿಂಗಳಲ್ಲಿ ಶ್ರುತಿ ರಘುನಾಥನ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಅಯ್ಯರ್ ತಮ್ಮ ನಿಶ್ಚಿತಾರ್ಥದ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಫೋಟೋವನ್ನು ಪೋಸ್ಟ್ ಮಾಡುವ ಮೂಲಕ ತಮ್ಮ ಅಭಿಮಾನಿಗಳಿಗೆ ಮಾಹಿತಿಯನ್ನು ನೀಡಿದ್ದರು.
ಈ ಬಾರಿಯ ಐಪಿಎಲ್ನಲ್ಲಿ ವೆಂಕಟೇಶ್ ಅಯ್ಯರ್ ಪ್ರದರ್ಶನದ ಬಗ್ಗೆ ಹೇಳುವುದಾದರೆ, ಈ ಸೀಸನ್ನಲ್ಲಿ 15 ಪಂದ್ಯಗಳನ್ನು ಆಡಿದ ಅಯ್ಯರ್, 46.25 ರ ಸರಾಸರಿಯಲ್ಲಿ 370 ರನ್ ಕಲೆಹಾಕಿದ್ದರು. ಇದರಲ್ಲಿ 4 ಅರ್ಧಶತಕಗಳು ಸೇರಿದ್ದವು.