ಬೆಂಗಳೂರು:- ಇಂದಿನಿಂದ ಕರ್ನಾಟಕದಾದ್ಯಂತ ಮುಂಗಾರು ಚುರುಕುಗೊಳ್ಳಲಿದೆ.
ಪೂರಿ ಜೊತೆಗೆ ಈ ಬಾಂಬೆ ಚಟ್ನಿ ಒಮ್ಮೆ ಟ್ರೈ ಮಾಡಿ.. ಅಬ್ಬಬ್ಬಾ ಏನ್ ಟೇಸ್ಟಿ ಗುರು.. !
ಉತ್ತರ ಕನ್ನಡ, ದಕ್ಷಿಣ ಕನ್ನಡ, ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಮಂಡ್ಯ, ಮೈಸೂರು, ತುಮಕೂರಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಶಿವಮೊಗ್ಗ, ರಾಮನಗರ, ವಿಜಯಪುರ, ಕೊಡಗು, ಕೋಲಾರ, ಚಾಮರಾಜನಗರ, ಚಾಮರಾಜನಗರ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿಯಲ್ಲಿ ಸಾಧಾರಣ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಮಳೆಯಾಗುವ ನಿರೀಕ್ಷೆ ಇದೆ. ಎಚ್ಎಎಲ್ನಲ್ಲಿ 33.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 34.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 32.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.