ಬೆಂಗಳೂರು: ನಾಳೆ ಮತ ಎಣಿಕೆ ಹಿನ್ನೆಲೆ ಬೆಂಗಳೂರಲ್ಲಿ ಸೂಕ್ತ ಭದ್ರತೆ ಕೈಗೊಳ್ಳಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ಹೇಳಿದ್ದಾರೆ. ನಾಳೆ ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಲಿದೆ. ಮತ ಎಣಿಕೆ ಕೇಂದ್ರಗಳಲ್ಲಿ ಸೂಕ್ತ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ. ಮೂರು ಹಂತಗಳಲ್ಲಿ ರಕ್ಷಣೆ ಕೊಡಲು ನಿರ್ಧಾರ ಮಾಡಲಾಗಿದೆ ಎಂದಿದ್ದಾರೆ.
ಇವಿಎಂ ಮಷಿನ್ ಇರುವ ಕೇಂದ್ರಗಳಲ್ಲಿ ಸಿಆರ್ಪಿಎಫ್ ಭದ್ರತೆ ಒದಗಿಸಲಾಗಿದ್ದು, ರಕ್ಷಣೆಗಾಗಿ ಕೆಎಸ್ಆರ್ಪಿ, ಸಿಎಆರ್ ತುಕಡಿಗಳ ನಿಯೋಜನೆ ಮಾಡಲಾಗಿದೆ. ಕಾನೂನುಸುವ್ಯವಸ್ಥೆ, ಸೂಕ್ತ ರೆಗ್ಯುಲೇಟರಿ ವ್ಯವಸ್ಥೆಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಡಿಸಿಪಿ ಮಟ್ಟದ ಅಧಿಕಾರಿಗಳು ಮೇಲುಸ್ತುವಾರಿ ವಹಿಸುತ್ತಾರೆ. ಮತ ಎಣಿಕೆ ಕೇಂದ್ರಗಳ ಹೊರಗೂ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಲಾಗಿದ್ದು, ಮತ ಎಣಿಕೆ ಕೇಂದ್ರಗಳ ಸುತ್ತಮುತ್ತ 144 ಸೆಕ್ಷನ್ ಜಾರಿಗೊಳಿಸಲಾಗಿದೆ ಎಂದಿದ್ದಾರೆ.
IAF Recruitment 2024: ಭಾರತೀಯ ವಾಯುಪಡೆಯಲ್ಲಿ ಭರ್ಜರಿ ಉದ್ಯೋಗವಕಾಶ..! ತಿಂಗಳಿಗೆ ಸಂಬಳ 56,000
ಇನ್ನೂ ಬೆಂಗಳೂರು ನಗರದಲ್ಲಿ 3 ಲೋಕಸಭಾ ಕ್ಷೇತ್ರಗಳಲ್ಲಿ ಮತ ಎಣಿಕೆ ಕಾರ್ಯಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ನಾಳೆ ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಕಾರ್ಯ ಆರಂಭವಾಗಲಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯಕ್ಕೆ ಮೇಲ್ವಿಚಾರಕರು, ಮತಎಣಿಕೆ ಸಹಾಯಕರ ನಿಯೋಜನೆ ಮಾಡಲಾಗಿದೆ.