ಬಳ್ಳಾರಿ:– 2024 ರ ಲೋಕಸಭೆ ಸಾರ್ವತ್ರಿಕ ಚುನಾವಣೆ ಮತ ಎಣಿಕೆಗೆ ಕ್ಷಣಗಣನೆ ಶುರುವಾಗಿದ್ದು, ನಗರದ ರಾವ್ ಬಹದ್ದೂರ್ ವೈ.ಮಹಾಬಲೇಶ್ವರ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮತ ಎಣಿಕೆ ನಡೆಯಲಿದೆ.
ರೋಗಿಗಳ ಸಂಬಂಧಿಕರಿಂದ ವೈದ್ಯರ ಮೇಲೆ ಹಲ್ಲೆ… ಬಳ್ಳಾರಿ ವಿಮ್ಸ್ ನಲ್ಲಿ ರಾತ್ರೋ ರಾತ್ರಿ ಧರಣಿ!
ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ 14 ಟೇಬಲ್ಗಳ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಟೇಬಲ್ಗೆ ಒಬ್ಬರು ಎಣಿಕಾ ಮೇಲ್ವಿಚಾರಕರು, ಒಬ್ಬರು ಎಣಿಕಾ ಸಹಾಯಕರು, ಒಬ್ಬರು ಮೈಕ್ರೋ ಅಬ್ಸರ್ವರ್ಸ್ಗಳನ್ನು ಜೊತೆ ಡಿ.ಗ್ರೂಪ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಒಟ್ಟು 112 ಟೇಬಲ್ಗಳಂತೆ, 150 ಎಣಿಕಾ ಮೇಲ್ವಿಚಾರಕರು, 159 ಎಣಿಕಾ ಸಹಾಯಕರು ಮತ್ತು 146 ಎಣಿಕಾ ಮೈಕ್ರೋ ಅಬ್ಸರ್ವರ್ಸ್ಗಳನ್ನು ನೇಮಕ ಮಾಡಲಾಗಿದೆ. ಒಟ್ಟು 18 ಸುತ್ತುಗಳಲ್ಲಿ ಮತ ಎಣಿಕೆ ನಡೆಯಲಿದ್ದು, ಮತ ಎಣಿಕೆ ಕೇಂದ್ರ ಸುತ್ತಲೂ 100 ಮೀಟರ್ ಪ್ರದೇಶ ಆವರಣದಲ್ಲಿ ವಾಹನಗಳ ಪ್ರವೇಶವಿರುವುದಿಲ್ಲ ಹಾಗೂ ಪೊಲೀಸ್ ಅಧಿಕಾರಿ, ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.
01-ಎಸ್ಪಿ, 02-ಎಎಸ್ಪಿ, 05-ಡಿವೈಎಸ್ಪಿ, 15-ಸಿಪಿಐ, 25-ಪಿಎಸ್ಐ, 40-ಎಎಸ್ಐ, 250-ಪಿಸಿ, 04-ಕೆಎಸ್ಆರ್ಪಿ, 04 ಡಿ.ಆರ್ ತಂಡ ಸಹಿತ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ.