ಚಿಕ್ಕಬಳ್ಳಾಪುರ:- ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಒಂದು ಮತದ ಲೀಡ್ನಿಂದ ಗೆದ್ದರೂ ರಾಜೀನಾಮೆ ನೀಡುವುದಾಗಿ ಶಾಸಕ ಪ್ರದೀಪ್ ಈಶ್ವರ್ ಸವಾಲು ಹಾಕಿದ್ದರು. ಹೀಗಾಗಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದ್ದಾರೆ.
Siddaramaiah: ಮೋದಿ ಅವರ ಜನಪ್ರಿಯತೆ ಕುಗ್ಗಿ ಹೋಗಿದೆ – CM ಸಿದ್ದರಾಮಯ್ಯ
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಚುನಾವಣೆಯಲ್ಲಿ ಬಿಜೆಪಿಯ ಡಾ.ಕೆ. ಸುಧಾಕರ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ವಿರುದ್ಧ 1,62,099 ಮತಗಳ ಅಂತರದಿಂದ ಜಯಭೇರಿ ಮೊಳಗಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿದ್ದ ಮಾಜಿ ಸಚಿವ ಸುಧಾಕರ್ ಅವರು ಈ ಬಾರಿ ಲೋಕಸಭಾ ಟಿಕೆಟ್ ಪಡೆದು ಗೆದ್ದು ಬೀಗಿದ್ದಾರೆ. ಹೀಗಾಗಿ ಶಾಸಕ ಪ್ರದೀಪ್ ಈಶ್ವರ್ ಈ ಹಿಂದೆ ಹೇಳಿದ್ದ ಮಾತುಗಳನ್ನು ಉಲ್ಲೇಖಿಸಿ ಬಿಜೆಪಿ ಕಾರ್ಯಕರ್ತರು ಟ್ರೋಲ್ ಮಾಡುತ್ತಿದ್ದಾರೆ
ನನ್ನ ಮಾತಿಗೆ ನಾನು ಬದ್ಧ. ಚಿಕ್ಕಬಳ್ಳಾಪುರ ವಿಧಾನಸಭಾ ಕಾಂಗ್ರೆಸ್ ಅಭ್ಯರ್ಥಿಗಿಂತ ಬಿಜೆಪಿ ಅಭ್ಯರ್ಥಿ ಹೆಚ್ಚು ಮತಗಳನ್ನು ಪಡೆದಿರುವುದರಿಂದ ನಾನು ನೈತಿಕ ಹೊಣೆ ಹೊತ್ತು, ಶಾಸಕ ಸ್ಥಾನಕ್ಕೆ ಜೂನ್ 5ರಂದು ಬೆಳಗ್ಗೆ 5ಗಂಟೆಗೆ ರಾಜೀನಾಮೆ ನೀಡಲಿದ್ದೇನೆ. ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಹಿನ್ನಡೆಗೆ ನಾನೇ ನೇರ ಹೊಣೆ ಎಂದು” ಶಾಸಕ ಪ್ರದೀಪ್ ಈಶ್ವರ್ ಅವರು ಹೇಳಿದಂತಿರುವ ಪೋಸ್ಟರ್ ವೈರಲ್ ಮಾಡಲಾಗಿದೆ. ಆದರೆ, ಇದು ಶಾಸಕ ಪ್ರದೀಪ್ ಈಶ್ವರ್ ಅವರ ಅಧಿಕೃತ ಪೋಸ್ಟರ್ ಅಲ್ಲ. ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಟ್ರೋಲ್ ಮಾಡುತ್ತಿದ್ದಾರೆ