ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಕೋಟ್ಯಂತರ ರೂಪಾಯಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಎಫ್ಐಆರ್ ದಾಖಲಿಸಿದೆ. ಯೂನಿಯನ್ ಬ್ಯಾಂಕ್ ಹಿರಿಯ ಅಧಿಕಾರಿಗಳ ಪತ್ರದ ಅನ್ವಯ ಬ್ಯಾಂಕಿನ ಮೂವರು ಸೇರಿ ಐವರ ವಿರುದ್ಧ ಎಫ್ಐಆರ್ ದಾಖಲು ಮಾಡಿದೆ. ಬೆಂಗಳೂರು ಪೂರ್ವ ವಲಯದ ಡಿಜಿಎಂ ಜೆ. ಮಹೇಶ್ ಎಂಬುವವರು ಸರ್ಕಾರಿ ಅಧಿಕಾರಿಗಳು, ಜನಪ್ರತಿನಿಧಿಗಳು,
Cardamom: ಕಡಿಮೆ ಬಂಡವಾಳ, ಅಧಿಕ ಲಾಭ..! ಈ ಏಲಕ್ಕಿ ಬೆಳೆಯಿಂದ ಲಕ್ಷಗಟ್ಟಲೆ ಲಾಭ!
ಖಾಸಗಿ ವ್ಯಕ್ತಿಗಳು ಶಾಮೀಲಾಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ. ಸದ್ಯ ವಿಶೇಷ ತನಿಖಾ ತಂಡ (SIT) ಈ ಕೇಸ್ ಸಿಬಿಐಗೆ ವರ್ಗಾವಣೆ ಆಗುವ ಸಾಧ್ಯತೆ ಹೆಚ್ಚಿದೆ. ಒಂದು ವೇಳೆ ರಾಜ್ಯ ಸರ್ಕಾರ ತನಿಖೆಯನ್ನು ಎಸ್ಐಟಿ ವರ್ಗಾವಣೆ ಮಾಡಲು ನಿರಾಕರಿಸಿದ್ದೆ ಆದಲ್ಲಿ ಸಿಬಿಐ ಕೋರ್ಟ್ ಮೊರೆ ಹೋಗುವ ಸಾಧ್ಯತೆಯಿದೆ.