ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ಅಕ್ರಮವಾಗಿ ಸಹಕಾರಿ ಬ್ಯಾಂಕ್ಗೆ ವರ್ಗಾವಣೆಯಾಗಿದ್ದ 45 ಕೋಟಿ ರೂ. ಹಣವನ್ನು ವಿಶೇಷ ತನಿಖಾ ತಂಡ (SIT) ಸೀಝ್ ಮಾಡಿದೆ. ನಿಗಮದಿಂದ ಹೈದರಾಬಾದ್ನಲ್ಲಿರುವ ಫಸ್ಟ್ ಫೈನಾನ್ಸ್ ಸಹಕಾರಿ ಬ್ಯಾಂಕಿಗೆ ಒಟ್ಟು 94.73 ಕೋಟಿ ರೂ. ವರ್ಗಾವಣೆಯಾಗಿತ್ತು. ಈಗಾಗಲೇ ಫಸ್ಟ್ ಫೈನಾನ್ಸ್ ಸಹಕಾರಿ ಬ್ಯಾಂಕ್ ಮಾಲೀಕ ಸತ್ಯನಾರಾಯಣ್ ಅವರನ್ನು ಬಂಧಿಸಲಾಗಿದೆ.
ಕುರಿ ಸಾಕಣೆ ಪ್ರಾರಂಭಿಸುವುದು ಹೇಗೆ? ನಿರ್ವಹಣೆ ಮತ್ತು ಆರೈಕೆ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.!
ಸಹಕಾರಿ ಬ್ಯಾಂಕ್ನ 18 ನಕಲಿ ಖಾತೆಗಳಿಗೆ ವರ್ಗಾವಣೆಯಾಗಿದ್ದ 94.73 ಕೋಟಿ ರೂ ಪೈಕಿ ಬಹುಪಾಲು ಹಣ ಡ್ರಾ ಮಾಡಲಾಗಿದೆ. ಉಳಿದ ಹಣ ಎಲ್ಲಿಗೆ ಹೋಗಿದೆ ಎಂಬುದರ ಕುರಿತು ಎಸ್ಐಟಿ ತನಿಖೆ ಮುಂದುವರಿಸಿದೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪದ್ಮನಾಭ, ಪರಶುರಾಮ್, ನೆಕ್ಕುಂಟಿ ನಾಗರಾಜ್, ನಾಗೇಶ್ವರ ರಾವ್, ಸತ್ಯನಾರಾಯಣ ಬಂಧನ ಮಾಡಿದ ಎಸ್ಐಟಿ ಕಸ್ಟಡಿಗೆ ಪಡೆದು ವಿಚಾರಣೆ ನಡೆಸುತ್ತಿದೆ.