ಬೆಂಗಳೂರು:ದೇಶ ಕಂಡ ಮುತ್ಸದ್ದಿ ರಾಜಕಾರಣಿ, ಮಾಜಿ ಮುಖ್ಯಮಂತ್ರಿಗಳು ಹಾಗೂ ಕೇಂದ್ರದ ಮಾಜಿ ಸಚಿವರಾಗಿದ್ದ ದಿವಂಗತ ಎಸ್ ಆರ್. ಬೊಮ್ಮಾಯಿಯವರ ಜನ್ಮ ಶತಮಾನೋತ್ಸವದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿಯವರು ಅವರಿಗೆ ನಮನ ಸಲ್ಲಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, “ನನ್ನ ಪೂಜ್ಯ ತಂದೆಯವರಾದ ಮಾಜಿ ಮುಖ್ಯಮಂತ್ರಿ ಎಸ್. ಆರ್. ಬೊಮ್ಮಾಯಿ ಅವರ 100 ನೇ ಜನ್ಮದಿನಾಚರಣೆಯ ದಿನದಂದು ಅವರಿಗೆ ಅನಂತ ಪ್ರಣಾಮಗಳನ್ನು ಸಲ್ಲಿಸುತ್ತೇನೆ. ಜನಸೇವಾ ತತ್ಪರರಾಗಿ ಅವರು ಪ್ರತಿಪಾದಿಸಿದ ಮೌಲ್ಯಗಳು, ಅವರ ಜೀವನ, ಅವರು ತೋರಿದ ದಾರಿ, ಕಲಿಸಿ ಕೊಟ್ಟ ಪಾಠ ನನ್ನ ಜೀವನದ ಆಧಾರ ಮತ್ತು ಆದರ್ಶವಾಗಿದೆ ಎಂದು ತಿಳಿಸಿದ್ದಾರೆ.
ಕುರಿ ಸಾಕಣೆ ಪ್ರಾರಂಭಿಸುವುದು ಹೇಗೆ? ನಿರ್ವಹಣೆ ಮತ್ತು ಆರೈಕೆ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.!
ಮುತ್ಸದ್ದಿ ರಾಜಕಾರಣಿಯಾಗಿದ್ದ ಎಸ್. ಆರ್. ಬೊಮ್ಮಾಯಿಯವರು ಭಾರತ ಸ್ವಾತಂತ್ರ್ಯ ಹೋರಾಟದಲ್ಲಿ ಬ್ರಿಟೀಷರ ವಿರುದ್ದ ನಡೆದ ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಪಾಲ್ಗೊಂಡಿದ್ದರು. ಕರ್ನಾಟಕದ ಮುಖ್ಯಮಂತ್ರಿಯಾಗಿ, ರಾಜ್ಯಸಭಾ ಸದಸ್ಯರಾಗಿ, ಕೇಂದ್ರದ ಮಾನವ ಸಂಪನ್ಮೂಲ ಸಚಿವರಾಗಿ ಕಾರ್ಯ ನಿರ್ವಹಿಸಿ ಜನಾನುರಾಗಿಯಾಗಿದ್ದರು.