ಬೆಂಗಳೂರು: ವಾಲ್ಮೀಕಿ ನಿಗಮದ ಬಹುಕೋಟಿ ಹಗರಣದಲ್ಲಿ ಸಚಿವ ನಾಗೇಂದ್ರ ರಾಜೀನಾಮೆ ಪಡೆಯುವಂತೆ ಸಿಎಂ ಸಿದ್ದರಾಮಯ್ಯರನ್ನ ಬಿಜೆಪಿ ಆಗ್ರಹ ಮಾಡಿದೆ. ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸಿಎಂಗೆ ಆಗ್ರಹಿಸಿರುವ ಬಿಜೆಪಿ, ಒಂದು ವೇಳೆ ನಾಗೇಂದ್ರ ರಾಜೀನಾಮೆ ಪಡೆಯದೇ ಹೋದ್ರೆ ಹೋರಾಟ ತೀವ್ರಗೊಳಿಸುವುದಾಗಿ ಎಚ್ಚರಿಕೆಯನ್ನು ಕೂಡ ನೀಡಿದೆ.
ಕುರಿ ಸಾಕಣೆ ಪ್ರಾರಂಭಿಸುವುದು ಹೇಗೆ? ನಿರ್ವಹಣೆ ಮತ್ತು ಆರೈಕೆ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.!
ಸಿಎಂ ಸಿದ್ದರಾಮಯ್ಯ ಅವರೇ, ವಾಲ್ಮೀಕಿ ಸಮುದಾಯಕ್ಕೆ ನಿಮ್ಮ ಸರ್ಕಾರ ಮಾಡಿರುವ ಮಹಾಮೋಸದ ವಿರುದ್ಧ ಸಿಬಿಐ ಎಫ್ಐಆರ್ ದಾಖಲಿಸಿದೆ. ನಿಮ್ಮಲ್ಲಿ ಅಲ್ಪಸ್ವಲ್ಪವಾದರೂ ನೈತಿಕತೆ ಉಳಿದಿದ್ದರೆ ಇನ್ನಾದರೂ ಸಂಬಂಧಪಟ್ಟ ನಾಗೇಂದ್ರ ಅವರ ರಾಜೀನಾಮೆ ಪಡೆಯಬೇಕು. ಸಚಿವ ನಾಗೇಂದ್ರ ರಾಜಿನಾಮೆ ನೀಡುವವರೆಗೂ ಬಿಜೆಪಿ ಹೋರಾಟವನ್ನು ಮುಂದುವರಿಸುತ್ತದೆ ಹಾಗೂ ಇನ್ನೂ ತೀವ್ರಗೊಳಿಸುತ್ತದೆ ಎಂದು ಎಚ್ಚರಿಕೆ ನೀಡಿದೆ.