ಬೆಂಗಳೂರು: ನಿರುದ್ಯೋಗದ ನೆಪ ಹೇಳಿ ಪತಿ ತನ್ನ ವಿಚ್ಛೇದಿತ ಪತ್ನಿ ಹಾಗೂ ಮಗುವಿಗೆ ಜೀವನಾಂಶ ನೀಡುವ ಜವಾಬ್ದಾರಿ ಯಿಂದ ಹಿಂದೆ ಸರಿಯುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಅಲ್ಲದೆ, ಪತ್ನಿಗೆ ಮಾಸಿಕ 7 ಸಾವಿರ ರೂ., ಅಪ್ರಾಪ್ತ ಮಗುವಿಗೆ 3 ಸಾವಿರ ರೂ. ಪಾವತಿಸುವಂತೆ ಕೌಟುಂಬಿಕ ನ್ಯಾಯಾಲಯದ ಮಧ್ಯಂತರ ಆದೇಶವನ್ನು ನ್ಯಾ. ಸಚಿನ್ ಶಂಕರ್ ಮಗದಂ ಅವರಿದ್ದ ಏಕಸದಸ್ಯ ಪೀಠ ಎತ್ತಿಹಿಡಿದಿದೆ.
ಬೆಳಗಾವಿ ಕೌಟುಂಬಿಕ ನ್ಯಾಯಾಲಯದ ಆದೇಶ ರದ್ದು ಕೋರಿ ಸುಮಿತ್ ಪತಿ ಸಲ್ಲಿಸಿದ ಅರ್ಜಿ ಪರಿಶೀಲಿಸಿದ ಏಕಸದಸ್ಯ ಪೀಠ, ಈ ಆದೇಶ ನೀಡಿದೆ. ”ದಂಪತಿ ಪರಸ್ಪರ ಬೇರೆಯಾಗಿದ್ದಾರೆ. ಈಗ ಕೆಲಸ ಮಾಡುತ್ತಿಲ್ಲಎಂದು ಪತಿಯು ಪತ್ನಿ ಹಾಗೂ ಅಪ್ರಾಪ್ತ ಮಗುವಿಗೆ ಜೀವನಾಂಶ ನೀಡುವ ಜವಾಬ್ದಾರಿಯಿಂದ ಹಿಂಜರಿಯುವುದು ಒಪ್ಪುವಂಥದ್ದಲ್ಲ. ಪ್ರಸ್ತುತ ಹಣದುಬ್ಬರದಿಂದ ಜನಸಮೂಹ ತತ್ತರಿಸಿ ಹೋಗಿದೆ.
ಕುರಿ ಸಾಕಣೆ ಪ್ರಾರಂಭಿಸುವುದು ಹೇಗೆ? ನಿರ್ವಹಣೆ ಮತ್ತು ಆರೈಕೆ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.!
ಇದೇ ಕಾರಣದಿಂದ ಖರ್ಚು- ವೆಚ್ಚವೂ ಗಣನೀಯ ಏರಿಕೆಯಾಗಿದೆ. ಹಾಗಾಗಿ, ಜೀವನ ನಿರ್ವಹಣೆ ಸುಲಭದ ಮಾತಲ್ಲ. ಬೆಳಗಾವಿ ನಗರದ ಜೀವನಶೈಲಿ ಅನ್ವಯ ಪತ್ನಿಗೆ 7 ಸಾವಿರ ರೂ. ಹಾಗೂ ಅಪ್ರಾಪ್ತ ಮಗುವಿಗೆ 3 ಸಾವಿರ ರೂ. ಪಾವತಿಸುವಂತೆ ಕೌಟುಂಬಿಕ ನ್ಯಾಯಾಲಯ ನೀಡಿರುವ ಮಧ್ಯಂತರ ಆದೇಶ ಸಮಂಜಸವಾಗಿದೆ,” ಎಂದು ನ್ಯಾಯಪೀಠ ಅಭಿಪ್ರಾಯಪಟ್ಟು ಪತಿಯ ಅರ್ಜಿ ವಜಾಗೊಳಿಸಿದೆ.
ಅರ್ಜಿದಾರರ ಪರ ವಕೀಲರು, ‘ಅರ್ಜಿದಾರರು ಕೆಲಸ ಕಳೆದು ಕೊಂಡು ನಿರುದ್ಯೋಗಿಯಾಗಿದ್ದಾರೆ. ಈ ಸಂದರ್ಭದಲ್ಲಿ ಜೀವನಾಂಶ ಪಾವತಿಸುವ ಸ್ಥಿತಿಯಲ್ಲಿಇಲ್ಲ. ಹಾಗಾಗಿ, ಕೌಟುಂಬಿಕ ನ್ಯಾಯಾಲಯದ ಆದೇಶ ರದ್ದುಗೊಳಿಸಬೇಕು” ಎಂದು ನ್ಯಾಯಪೀಠವನ್ನು ಮನವಿ ಮಾಡಿದರು.