ಬೆಂಗಳೂರು: ಉತ್ತರಾಖಂಡದಲ್ಲಿ ಕನ್ನಡಿಗ ಪ್ರವಾಸಿಗರು ನಾಪತ್ತೆ ಪ್ರಕರಣ ಸಂಬಂಧ ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಈ ಸಂಬಂಧ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಉತ್ತರಾಖಂಡದ ಉತ್ತರಕಾಶಿಯ ಸಹಸ್ತ್ರ ತಾಲ್ಗೆ ಟ್ರೆಕ್ಕಿಂಗ್ಗೆ ತೆರಳಿದ್ದ ಕರ್ನಾಟಕದ 18 ಮಂದಿ ಪ್ರವಾಸಿಗರು ಸೇರಿ 22 ಜನ ನಾಪತ್ತೆಯಾಗಿರುವ ಸುದ್ದಿ ವರದಿಯಾಗಿದೆ. ಪ್ರತಿಕೂಲ ವಾತಾವರಣದಿಂದ ದಿಕ್ಕು ತಪ್ಪಿರಬಹುದಾದ ಸಾಹಸಿ ಚಾರಣಿಗರು ಸುರಕ್ಷಿತವಾಗಿ ವಾಪಸ್ ಬರುವಂತಾಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.
ಕುರಿ ಸಾಕಣೆ ಪ್ರಾರಂಭಿಸುವುದು ಹೇಗೆ? ನಿರ್ವಹಣೆ ಮತ್ತು ಆರೈಕೆ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.!
ಈ ನಿಟ್ಟಿನಲ್ಲಿ ಅವರನ್ನು ಪತ್ತೆ ಹಚ್ಚಲು ನಡೆಯುತ್ತಿರುವ ಕಾರ್ಯಾಚರಣೆ ಯಶಸ್ವಿಯಾಗುವಂತೆ ಹಾಗೂ ಕರ್ನಾಟಕ ಸರ್ಕಾರ ಉತ್ತರಾಖಂಡ ಸರ್ಕಾರದೊಂದಿಗೆ ಈ ಕೂಡಲೇ ಸಂಪರ್ಕ ಬೆಳೆಸಿ 18 ಕನ್ನಡಿಗ ಪ್ರವಾಸಿಗರೂ ಸುರಕ್ಷಿತವಾಗಿ ತಾಯ್ನಾಡಿಗೆ ಮರಳಿ ಬರುವಂತಾಗಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲಿ ಎಂದು ವಿನಂತಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.