ಬೆಂಗಳೂರು:- ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಗೆ ಇಂದು ರಾಹುಲ್ ಗಾಂಧಿ ಹಾಜರಾಗುವ ಹಿನ್ನೆಲೆ ನ್ಯಾಯಾಲಯದ ಸುತ್ತಮುತ್ತ ಹೈ ಅಲರ್ಟ್ ಘೋಷಿಸಲಾಗಿದೆ.
ರಾಹುಲ್ ಗಾಂಧಿ ಬೆಂಗಳೂರಿಗೆ ಬಂದ ವೇಳೆ ಅತಿ ಹೆಚ್ಚಿನ ಕಾರ್ಯಕರ್ತರು ಸೇರಬೇಕು ಅಂತಾ ಡಿಸಿಎಂ ಡಿಕೆ ಶಿವಕುಮಾರ್ ಕರೆ ಕೊಟ್ಟಿದ್ದಾರೆ. ಈ ಮೂಲಕ ರಾಹುಲ್ ಗಾಂಧಿ ಪರವಾಗಿ ರಾಜ್ಯದ ಜನರಿದ್ದಾರೆ ಅನ್ನೋ ಸಂದೇಶ ರವಾನಿಸೋಕೆ ಪ್ಲ್ಯಾನ್ ಮಾಡಿದ್ದಾರೆ ಎನ್ನಲಾಗಿದೆ. ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಕೋರ್ಟ್ಗೆ ಹಾಜರಾಗಿದ್ದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಶನಿವಾರ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಬಿಜೆಪಿ ಎಂಎಲ್ಸಿ ಮತ್ತು ಪ್ರಧಾನ ಕಾರ್ಯದರ್ಶಿ ಕೇಶವ ಪ್ರಸಾದ್ ಅವರು ಸಿದ್ದರಾಮಯ್ಯ, ಶಿವಕುಮಾರ್ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದ ವೇಳೆ ಪೇಸಿಎಂ ಪೋಸ್ಟರ್ ಹಾಗೂ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದ ಆರೋಪ ಪ್ರಕರಣದಲ್ಲಿ ಇಂದು ರಾಹುಲ್ ಗಾಂಧಿ ಕೋರ್ಟ್ಗೆ ಹಾಜರಾಗಲಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ ಅವರ ಸರ್ಕಾರದ ಅವಧಿಯಲ್ಲಿ ವಿರೋಧ ಪಕ್ಷದ ಸ್ಥಾನದಲ್ಲಿದ್ದ ಕಾಂಗ್ರೆಸ್ ನಾಯಕರು, ರಾಜ್ಯ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದರು. ಅಲ್ಲದೇ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಇದನ್ನೇ ಪ್ರಮುಖ ಅಸ್ತ್ರವನ್ನಾಗಿ ಪ್ರಯೋಜಿಸಿತ್ತು. ಅಲ್ಲದೇ ಕಳೆದ ನಾಲ್ಕು ವರ್ಷಗಳಲ್ಲಿ1.50 ಲಕ್ಷ ಕೋಟಿ ರೂಪಾಯಿ ಲೂಟಿ ಹೊಡೆದಿರುವ ಭ್ರಷ್ಟ ಸರ್ಕಾರ ಎಂದು ಆರೋಪಿಸಿ, ವರ್ಗಾವಣೆಗೆ ನಿಗದಿಪಡಿಸಿದ್ದ ದರ ಪಟ್ಟಿಯನ್ನು ಬಿಡುಗಡೆ ಮಾಡಿ ಗಂಭೀರ ಆರೋಪ ಮಾಡಿತ್ತು.