ಬೆಂಗಳೂರು: ಕೆ.ಆರ್ ನಗರ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೆ ಕೊನೆಗೂ ಮಧ್ಯಂತರ ಜಾಮೀನು ಸಿಕ್ಕಿದೆ. ಶುಕ್ರವಾರ ಮಧ್ಯಾಹ್ನ ಒಂದು ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಹೈಕೋರ್ಟ್ ಸೂಚಿಸಿದೆ. ಕೋರ್ಟ್ ವಿಚಾರಣೆಯ ಬಳಿಕ 5 ಗಂಟೆಗಳ ಕಾಲ ಮಾತ್ರ ಅವರನ್ನು ಕಸ್ಟಡಿಯಲ್ಲಿ ಇರಿಸಿಕೊಳ್ಳಬಹುದು ಎಂದು ಆದೇಶಿಸಿದೆ.
High Court: ನಿರುದ್ಯೋಗದ ನೆಪ ಹೇಳಿ ಜೀವನಾಂಶದಿಂದ ಪತಿ ತಪ್ಪಿಸಿಕೊಳ್ಳಲಾಗದು: ಹೈಕೋರ್ಟ್ ಆದೇಶ
ಭವಾನಿ ಅವರನ್ನು ಎಸ್ಐಟಿ ಬಂಧಿಸಬಾರದು. ಕೆ ಆರ್ ನಗರ ತಾಲೂಕು ಮತ್ತು ಹಾಸನಕ್ಕೆ ಭವಾನಿ ಪ್ರವೇಶಿಸಿಬಾರದು. ತನಿಖೆಗೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಕೋರ್ಟ್ ಷರತ್ತು ವಿಧಿಸಿದೆ. ಭವಾನಿ ವಿಚಾರಣೆಗೆ ಹಾಜರಾಗದಿದ್ದಕ್ಕೆ ಬಂಧನ ವಾರೆಂಟ್ ಜಾರಿ ಮಾಡಲಾಗಿದೆ. ಈ ಆದೇಶ ಅಮಾನತಿನಲ್ಲಿ ಇಡಲಾಗಿದೆ ಎಂದು ಹೇಳಿದ ಹೈಕೋರ್ಟ್ ವಿಚಾರಣೆಯನ್ನು ಮುಂದಿನ ವಾರಕ್ಕೆ ಮುಂದೂಡಿತು.