ಮೈಸೂರು:– ಮೈಸೂರಿನ ಹಳೇ ಕೆಸರೆಯ ಗುಜರಿ ಗೋದಾಮಿನಲ್ಲಿ ವಿಷಕಾರಿ ಅನಿಲ ಸೋರಿಕೆಯಾಗಿ ಆರು ಜನ ಅಸ್ವಸ್ಥರಾದ ಘಟನೆ ಜರುಗಿದೆ.
ಕೂಡಲೇ ಆರು ಜನರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಇದೀಗ ಅಕ್ಕಪಕ್ಕದ ನಿವಾಸಿಗಳೂ ಅಸ್ವಸ್ಥರಾಗಿದ್ದು, ಉಸಿರಾಟದ ತೊಂದರೆ, ಕೆಮ್ಮು ಕಾಣಿಸಿಕೊಂಡು ಪರದಾಡುತ್ತಿದ್ದಾರೆ. ಈ ಹಿನ್ನಲೆ ಸುಮಾರು 50 ಕ್ಕೂ ಹೆಚ್ಚು ಮಂದಿಗೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಹಾಗೂ ಪೊಲೀಸರು ಭೇಟಿ ನೀಡಿದ್ದಾರೆ. ಗೋದಾಮಿನಲ್ಲಿ ವಿಷಕಾರಿ ಅನಿಲ ಸೋರಿಕೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಸಧ್ಯ ಅಸ್ವಸ್ಥಗೊಂಡವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.