ಬೆಂಗಳೂರು:– ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜೂ.10 ರವರೆಗೂ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಲೋಕಸಭಾ ಚುನಾವಣೆಯಲ್ಲಿ ಸೋಲುವ ನಿರೀಕ್ಷೆ ನಮಗಿರಲಿಲ್ಲ – ಸಂಯುಕ್ತಾ ಪಾಟೀಲ್!
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ಪ್ರತಿ ಗಂಟೆಗೆ 40-50 ಕಿಮಿ ವೇಗದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರು, ಚಿಕ್ಕಬಳ್ಳಾಪುರ, ಬೆಳಗಾವಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಗದಗ, ಯಾದಗಿರಿ, ಕಲಬುರಗಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಉ.ಕ, ದ.ಕ, ಉಡುಪಿ ಜಿಲ್ಲೆಗಳಲ್ಲಿ ಕೆಲವು ಕಡೆ ಭಾರಿ ಮಳೆ ಸಾಧ್ಯತೆ ಇದ್ದು, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರು ನಗರದಲ್ಲಿ ಜೂನ್ 10ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ತಜ್ಞ ಸಿ.ಎಸ್ ಪಾಟೀಲ್ ಅಧಿಕೃತ ಮಾಹಿತಿ ನೀಡಿದ್ದಾರೆ