ಬೆಂಗಳೂರು: ಪರಿಶಿಷ್ಟ ಜಾತಿ, ಪಂಗಡ ಮತ್ತು ಮುಸ್ಲಿಂ ಸಮುದಾಯಗಳ ಕುರಿತು ಅವಹೇಳನಾಕಾರಿ ಪೋಸ್ಟ್ ಹಂಚಿಕೊಂಡ ಆರೋಪದ ಮೇರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಸಾಮಾಜಿಕ ಜಾಲತಾಣಗಳ ವಿಭಾಗದ ಮುಖ್ಯಸ್ಥ ಅಮಿತ್ ಮಾಳವಿಯ ವಿರುದ್ಧ ದಾಖಲಾಗಿದ್ದ ಎಫ್ಐಆರ್ ರದ್ದು ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್, ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.
ಪ್ರಕರಣ ರದ್ದು ಕೋರಿ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಅಮಿತ್ ಮಾಳವೀಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠ, ಅರ್ಜಿ ಸಂಬಂಧ ಆಕ್ಷೇಪಣೆ ಸಲ್ಲಿಸಲು ಸೂಚನೆ ನೀಡಿ ವಿಚಾರಣೆ ಮುಂದೂಡಿದೆ. ಅರ್ಜಿದಾರರ ಪರ ವಕೀಲರು, ‘ ಪ್ರಕರಣದಲ್ಲಿಅರ್ಜಿದಾರರ ಯಾವುದೇ ಪಾತ್ರವಿಲ್ಲ. ಆದರೂ, ಅರ್ಜಿದಾರರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಸಾಮಾಜಿಕ ಜಾಲತಾಣದ ಅಧ್ಯಕ್ಷರಾಗಿದ್ದಾರೆಂಬ ಕಾರಣಕ್ಕೆ ಅವರನ್ನು ಪ್ರಕರಣದಲ್ಲಿ ಸಿಲುಕಿಸಲಾಗಿದೆ.
Famous Places: ಉಡುಪಿಯಲ್ಲಿ ನೀವು ಭೇಟಿ ನೀಡಲೇಬೇಕಾದ ಸ್ಥಳಗಳು ಯಾವುವು ಗೊತ್ತಾ..? ಈ ಸ್ಟೋರಿ ನೋಡಿ
ಆದ್ದರಿಂದ ಪ್ರಕರಣ ರದ್ದುಪಡಿಸಬೇಕು ‘ ಎಂದು ಕೋರಿದರು. ಅಲ್ಲದೆ, ಅರ್ಜಿಯಲ್ಲಿಪ್ರತಿ ರಾಜ್ಯದ ಸಾಮಾಜಿಕ ಜಾಲತಾಣಗಳಲ್ಲಿ ಮಾಡುವ ಆಪಾದನೆಗಳಿಗೆ ರಾಷ್ಟ್ರಧ್ಯಕ್ಷರ ಪಾತ್ರವಿದೆ ಎಂಬುದಾಗಿ ಅರ್ಥೈಸುವಂತಿಲ್ಲ. ಈ ಆರೋಪ ಸಂಬಂಧ ನಿರ್ದಿಷ್ಟವಾದ ಸಾಕ್ಷ್ಯಾಧಾರಗಳಿಲ್ಲ. ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ದಾಖಲಾಗಿದ್ದರೂ, ಇದೇ ಆರೋಪ ಸಂಬಂಧ ಮಲ್ಲೇಶ್ವರ ಪೊಲೀಸ್ ಠಾಣೆಯಲ್ಲಿಯೂ ಮತ್ತೊಂದು ಪ್ರಕರಣ ದಾಖಲಿಸಲಾಗಿದೆ. ಕಾನೂನಿನಲ್ಲಿ ಅದಕ್ಕೆ ಅವಕಾಶವಿಲ್ಲ ‘ ಎಂದರು.