ಬೆಂಗಳೂರು: ಈ ಸಲ ಬಿಜೆಪಿ ಸರ್ಕಾರ ಎಷ್ಟು ದಿನ ಇರುತ್ತದೋ ಹೇಳಲು ಸಾಧ್ಯವಿಲ್ಲ. ಅದರಲ್ಲೂ ನಿತೀಶ್ ಕುಮಾರ್ ತರಹದ ವ್ಯಕ್ತಿಯನ್ನು ಇಟ್ಟುಕೊಂಡು ಸರ್ಕಾರ ನಡೆಸುವುದು ಎಷ್ಟು ಕಷ್ಟ ಎನ್ನುವುದು ನಮಗೆ ಗೊತ್ತಿದೆ ಎಂದು ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ.
ಸದಾಶಿವನಗರ ನಿವಾಸದಲ್ಲಿ ಮಾತನಾಡಿದ ಅವರು, “ಕಳೆದ ಒಂದು ವರ್ಷದಲ್ಲಿ ರಾಜ್ಯ ಸರ್ಕಾರ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದು, ಜನರಿಗೆ ಅದರ ಲಾಭ ಸಿಗುವಂತೆ ಮಾಡಿತ್ತು. ಆದರೂ ನಾವು ಎಡವಿದ್ದೆಲ್ಲಿ ಎನ್ನುವುದನ್ನು ಕಂಡುಕೊಳ್ಳಲಿದ್ದೇವೆ. ಗೆಲ್ಲಬಹುದಾಗಿದ್ದ ಕೆಲವು ಕ್ಷೇತ್ರಗಳು ಕೈಜಾರಿರುವುದು ನಮಗೆ ಗೊತ್ತಾಗಿದೆ. ಚುನಾವಣೆ ಹಿನ್ನಡೆಗೆ ಯಾರೋ ಒಬ್ಬರನ್ನು ಹೊಣೆ ಮಾಡುವುದು ಸಾಧ್ಯವಿಲ್ಲ.
Famous Places: ಉಡುಪಿಯಲ್ಲಿ ನೀವು ಭೇಟಿ ನೀಡಲೇಬೇಕಾದ ಸ್ಥಳಗಳು ಯಾವುವು ಗೊತ್ತಾ..? ಈ ಸ್ಟೋರಿ ನೋಡಿ
ಸಚಿವರ ಅಥವಾ ಶಾಸಕರ ಮೌಲ್ಯಮಾಪನ ಕೂಡ ನಡೆಯುವುದಿಲ್ಲ. ಪಕ್ಷದ ಮುಂದಿನ ಕಾರ್ಯತಂತ್ರ ಏನಿರಬೇಕು ಎಂದಷ್ಟೇ ಚಿಂತಿಸಲಾಗುವುದು” ಎಂದರು.ಈಗ ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿ ಆಗುತ್ತಿದ್ದಾರೆ. ಕಳೆದ ಎರಡು ಬಾರಿಗಿಂತ ಈ ಸಲ ಬಿಜೆಪಿ ಬಲ ಕುಂದಿದೆ. ಹೀಗಾಗಿ ಈ ಸಲ ಅವರ ಸರ್ಕಾರ ಎಷ್ಟು ದಿನ ಇರುತ್ತದೋ ಹೇಳಲು ಸಾಧ್ಯವಿಲ್ಲ. ಅದರಲ್ಲೂ ನಿತೀಶ್ ಕುಮಾರ್ ತರಹದ ವ್ಯಕ್ತಿಯನ್ನು ಇಟ್ಟುಕೊಂಡು ಸರ್ಕಾರ ನಡೆಸುವುದು ಎಷ್ಟು ಕಷ್ಟ ಎನ್ನುವುದು ನಮಗೆ ಗೊತ್ತಿದೆ” ಎಂದು ಭವಿಷ್ಯ ನುಡಿದರು.