ನಾಳೆ ಭಾರತ ಹಾಗೂ ಪಾಕಿಸ್ತಾನ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯುತ್ತಿದೆ. ಉಭಯ ತಂಡಗಳ ಕಾಳಗ ನಡೆದಾಗ ಭಯೋತ್ಪಾದಕ ದಾಳಿ ನಡೆಯುವ ಬಗ್ಗೆ ಎಚ್ಚರಿಕೆಯ ಸಂದೇಶಗಳು ಬರುವುದು ಸಹಜ. ಅದರಂತೆ ಈ ಪಂದ್ಯಕ್ಕೂ ಅದೇ ರೀತಿಯ ಬೆದರಿಕೆ ಒಡ್ಡಲಾಗಿದೆ. ಹೀಗಾಗಿ ಈ ಪಂದ್ಯದಲ್ಲಿ ಎರಡು ತಂಡಗಳ ಕ್ರಿಕೆಟಿಗರಿಗೆ ಸಂಪೂರ್ಣ ಭದ್ರತೆ ನೀಡಲು ಅಮೆರಿಕ ಅಧಿಕಾರಿಗಳು ಪೂರ್ಣ ಸಜ್ಜಾಗಿದ್ದಾರೆ.
ಬ್ರಷ್ ಮಾಡಿದ್ರೂ ಬಾಯಿಂದ ಕೆಟ್ಟ ಸ್ಮೆಲ್ ಬರ್ತಿದ್ಯಾ!?.. ಹಾಗಿದ್ರೆ ಇದು ಈ ರೋಗದ ಲಕ್ಷಣ!
ನಸ್ಸೌ ಕೌಂಟಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತ-ಪಾಕ್ ಪಂದ್ಯವನ್ನು ಸುರಕ್ಷಿತವಾಗಿ ಆಯೋಜಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಭಾರತ-ಪಾಕಿಸ್ತಾನ ಪಂದ್ಯದಲ್ಲಿ ಭಯೋತ್ಪಾದಕ ದಾಳಿಯ ಬೆದರಿಕೆಯ ಕುರಿತು ನಸ್ಸೌ ಕೌಂಟಿಯ ಕಾರ್ಯನಿರ್ವಾಹಕ ಬ್ರೂಸ್ ಬ್ಲೇಕ್ಮ್ಯಾನ್ ಮಾತನಾಡಿದ್ದು, ‘ಇದರಲ್ಲಿ ಅನಿರೀಕ್ಷಿತ ಏನೂ ಇಲ್ಲ. ಭಾರತ ಹಾಗೂ ಪಾಕಿಸ್ತಾನದ ನಡುವೆ ಪಂದ್ಯ ನಡೆದಾಗ ಈ ರೀತಿಯ ಬೆದರಿಕೆಗಳು ಬರುವುದು ಸಹಜ. ಹೀಗಾಗಿ ಎಲ್ಲರನ್ನೂ ಸುರಕ್ಷಿತವಾಗಿರಿಸಲು ನಾವು ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದೇವೆ ಎಂದರು.
ಅಮೆರಿಕದ ಮಾಜಿ ಅಧ್ಯಕ್ಷರಿಗಿಂತ ಭಾರತ-ಪಾಕಿಸ್ತಾನ ಪಂದ್ಯಕ್ಕೆ ಹೆಚ್ಚಿನ ಮಹತ್ವ ಸಿಗುತ್ತಿದೆ. ನಸ್ಸೌ ಕೌಂಟಿ ಪೊಲೀಸ್ ಕಮಿಷನರ್ ಪ್ಯಾಟ್ರಿಕ್ ರೈಡರ್ ಮಾಧ್ಯಮ ಕಾರ್ಯಕ್ರಮವೊಂದರಲ್ಲಿ ಮಾತನಾಡಿ, ‘ಕ್ರಿಕೆಟ್ ಆಡುವುದು ನಮಗೆ ಹೊಸದೇ ಆಗಿರಬಹುದು, ಆದರೆ ಭದ್ರತೆ ಒದಗಿಸುವುದು ಅಲ್ಲ. ಕೆಲವು ವರ್ಷಗಳ ಹಿಂದೆ ನಾವು ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಬರಾಕ್ ಒಬಾಮಾ ಅವರಿಗೆ ಭದ್ರತೆ ಒದಗಿಸಿದ್ದೇವು. ಆದರೆ ಈಗ ನಡೆಯುತ್ತಿರುವ ಭಾರತ-ಪಾಕಿಸ್ತಾನ ನಡುವಿನ ಪಂದ್ಯಕ್ಕೆ ಅದಕ್ಕಿಂತಲೂ ಹೆಚ್ಚಿನ ಮಟ್ಟದ ಭದ್ರತೆಯನ್ನು ಒದಗಿಸಲಾಗುತ್ತಿದೆ ಎಂದರು.
ನಗರದ ಸುತ್ತಲೂ ವಿಶೇಷ ಕಣ್ಗಾವಲು ಒದಗಿಸಲು ಗಸ್ತುಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ. ಕ್ರೀಡಾಂಗಣಕ್ಕೆ ಹೋಗುವ ಎಲ್ಲಾ ರಸ್ತೆಗಳಲ್ಲಿ ಮತ್ತು ಕ್ರೀಡಾಂಗಣದ ಮೂಲೆ ಮೂಲೆಗಳಲ್ಲಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.