ನವದೆಹಲಿ:– ಇಂದು ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇಂದು ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.
Hubballi: ಫೆಡರೇಷನ್ ಆಫ್ ಕರ್ನಾಟಕ ಲಾರಿ ಓನರ್ಸ್ ಅಸೋಸಿಯೇಷನ್ನ 33ನೇ ವಾರ್ಷಿಕ ಸರ್ವ ಸದಸ್ಯರ ಸಭೆ
ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ಸತತ ಮೂರನೇ ಅವಧಿಗೆ ಕೇಂದ್ರದಲ್ಲಿ ಸರ್ಕಾರ ರಚಿಸಲಿದೆ. ಶುಕ್ರವಾರ ನಡೆದ ಸಭೆಯಲ್ಲಿ, ಹೊಸದಾಗಿ ಆಯ್ಕೆಯಾದ ಸಂಸದರು ಸರ್ವಾನುಮತದಿಂದ ಮೋದಿಯನ್ನು ತಮ್ಮ ನಾಯಕನನ್ನಾಗಿ ಆಯ್ಕೆ ಮಾಡಿದರು. ಇದೀಗ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲು ನರೇಂದ್ರ ಮೋದಿ ಸಜ್ಜಾಗಿದ್ದಾರೆ.
ಮೋದಿಯವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಜೂನ್ 9 ರ ಭಾನುವಾರ ಸಂಜೆ 7:15 ರ ಸುಮಾರಿಗೆ ನಡೆಯಲಿದೆ. ಜೂನ್ 5 ರಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿ ಭವನದಲ್ಲಿ ಭೇಟಿಯಾಗಿ ತಮ್ಮ ಮತ್ತು ಕೇಂದ್ರ ಸಚಿವ ಸಂಪುಟದ ರಾಜೀನಾಮೆಯನ್ನು ಸಲ್ಲಿಸಿದರು
ಸಮಾರಂಭಕ್ಕೆ 8000ಕ್ಕೂ ಹೆಚ್ಚು ಗಣ್ಯರು ಆಗಮಿಸುವ ನಿರೀಕ್ಷೆಯಿದೆ. ವಿವಿಧ ದೇಶಗಳ ವಿದೇಶಿ ನಾಯಕರು ಭಾಗವಹಿಸಲು ಆಹ್ವಾನವನ್ನು ಸ್ವೀಕರಿಸಿದ್ದಾರೆ. ಅವರು ಇಂದು ನವದೆಹಲಿಗೆ ಆಗಮಿಸುವ ಯೋಜನೆ ಇದೆ. ಸಮಾರಂಭದ ನಂತರ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಯೋಜಿಸಿರುವ ಔಪಚಾರಿಕ ಔತಣ ಕೂಟದಲ್ಲಿ ಗಣ್ಯರು ಪಾಲ್ಗೊಳ್ಳಲಿದ್ದಾರೆ
ಸಾರ್ಕ್ ನಾಯಕರು ಸಮಾರಂಭದಲ್ಲಿ ಪಾಲ್ಗೊಳ್ಳಲು ಸಜ್ಜಾಗುತ್ತಿರುವ ಕಾರಣ ದೆಹಲಿಯು ಭಾನುವಾರ ಹೈ ಅಲರ್ಟ್ ಆಗಿದೆ. ಲೀಲಾ, ತಾಜ್, ಐಟಿಸಿ ಮೌರ್ಯ, ಕ್ಲಾರಿಡ್ಜಸ್ ಮತ್ತು ಒಬೆರಾಯ್ ಸೇರಿದಂತೆ ಪ್ರಮುಖ ಹೋಟೆಲ್ಗಳು ಈಗಾಗಲೇ ಬಿಗಿ ಭದ್ರತೆಯಲ್ಲಿವೆ. ಗಣ್ಯರು ತಮ್ಮ ಹೋಟೆಲ್ಗಳು ಮತ್ತು ಸ್ಥಳದ ನಡುವೆ ಪ್ರಯಾಣಿಸಲು ಪೊಲೀಸ್ ಅಧಿಕಾರಿಗಳು ಸುರಕ್ಷಿತ ಮಾರ್ಗವನ್ನು ಏರ್ಪಡಿಸಿದ್ದಾರೆ.