ಬೆಂಗಳೂರು:- ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ಕೇಸ್ ಗೆ ಸಂಬಂಧಿಸಿದಂತೆ ಆಕ್ರೋಶ ಹೊರ ಹಾಕಿರುವ ಜೆಡಿಎಸ್, ಕಾಂಗ್ರೆಸ್ ನುಂಗಿದ ಹಣ ವಾಪಸ್ ಬರಲ್ಲ ಎಂದ ಹೇಳಿದೆ.
ರಾಜಧಾನಿ ಬೆಂಗಳೂರಿನಲ್ಲಿ ಹೆಚ್ಚಾಯ್ತು ಡಿವೋರ್ಸ್ ಕೇಸ್.. ಹೀಗಾದ್ರೆ ಸಂಬಂಧದ ಮಹತ್ವ ಏನಾಗುತ್ತೆ..!
ಹಗರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ತೆಲಂಗಾಣ ಮುಖ್ಯಮಂಯತ್ರಿ ರೇವಂತ ರೆಡ್ಡಿ ಅವರಿಗೆ ಪತ್ರ ಬರೆದಿದ್ದು, ನಮ್ಮ ರಾಜ್ಯದ ಹಣವನ್ನು ಹಿಂತಿರುಗಿಸಿ ಕೊಡಿ ಎಂದು ಮನವಿ ಮಾಡಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮವಾಗಿ ಹೈದರಾಬಾದ್ನ ಫಸ್ಟ್ ಫೈನಾನ್ಸ್ ಸಹಕಾರಿ ಬ್ಯಾಕ್ಗೆ ವರ್ಗಾವಣೆಯಾಗಿದೆ ಎಂಬುವುದು ವಿಶೇಷ ತನಿಖಾ ದಳ (SIT) ಅಧಿಕಾರಿಗಳ ತನಿಖೆಯಲ್ಲಿ ತಿಳಿದುಬಂದಿದೆ. ಈ ಸಂಬಂಧ ಎಸ್ಐಟಿ ಅಧಿಕಾರಿಗಳು ಈಗಾಗಲೆ ಹೈದರಾಬಾದ್ಗೆ ತೆರಳಿದ್ದು, ಸಹಕಾರಿ ಬ್ಯಾಂಕ್ನಲ್ಲಿ ನಿಗಮದ 45 ಕೋಟಿ ರೂ. ಹಣ ಜಪ್ತಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಜೆಡಿಎಸ್ ತೆಲಂಗಾಣ ಮುಖ್ಯಮಂತ್ರಿ ರೇವಂತ ರೆಡ್ಡಿಯವರಿಗೆ ಪತ್ರ ಬರೆದಿದೆ.
ಗುಂಡಿಗೆ ಹೋದ ಹೆಣ, ರಾಜ್ಯ ಕಾಂಗ್ರೆಸ್ ನುಂಗಿದ ಹಣ ಎಂದಿಗೂ ವಾಪಸ್ ಬರುವುದಿಲ್ಲ ಎಂಬುದು ತಿಳಿದಿದ್ದರೂ ಕೊನೆ ಪ್ರಯತ್ನವಾಗಿ ತೆಲಂಗಾಣದ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರಿಗೆ ಕನ್ನಡಿಗರ ಪತ್ರ” ಎಂದು ಉಲ್ಲೇಖಿಸಿ ಪತ್ರ ಬರೆದಿದೆ.
ಕರ್ನಾಟಕದ ವಾಲ್ಮೀಕಿ ಸಮುದಾಯಕ್ಕೆ ಸೇರಬೇಕಾಗಿದ್ದ ಸುಮಾರು 187 ಕೋಟಿ ರೂ. ಹಣವನ್ನು ನಿಮ್ಮ ನಾಯಕ ರಾಹುಲ್ ಗಾಂಧಿ ಅವರ ಅಣತಿಯಂತೆ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರ, ಸಚಿವ ನಾಗೇಂದ್ರ ಅವರ ಮೂಲಕ ತೆಲಂಗಾಣದ ಕಾಂಗ್ರೆಸ್ ಚುನಾವಣಾ ಖರ್ಚಿಗೆ ಸಾಗಿಸಿದ್ದಾರೆ.”
ನಿಮ್ಮಲ್ಲಿ ಕನ್ನಡಿಗರು ಕೇಳಿಕೊಳ್ಳುವುದೇನೆಂದರೆ ನಮ್ಮ ರಾಜ್ಯಕ್ಕೆ ಸೇರಬೇಕಾಗಿದ್ದ ಹಣವನ್ನು ದಯಮಾಡಿ ಹಿಂತಿರುಗಿಸಿ ಕೊಡಿ. ಈ ಹಣ ವಾಲ್ಮೀಕಿ ಸಮುದಾಯದ ಏಳಿಗೆಗಾಗಿ ಬಳಕೆ ಆಗಬೇಕಿತ್ತು ಈ ನೀಚ ಸರ್ಕಾರ ಉಂಡು ಹೋದ ಕೊಂಡು ಹೋದ ಎಂಬಂತೆ ತಮ್ಮ ಸ್ವಾರ್ಥಕ್ಕಾಗಿ ಇಲ್ಲಿ ಲೂಟಿ ಹೊಡೆದದ್ದಲ್ಲದೆ, ಮಿಕ್ಕ ಹಣವನ್ನೂ ಬೇರೆ ಬೇರೆ ರಾಜ್ಯಗಳ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಖರ್ಚಿಗೆ ಸಾಗಿಸಿದ್ದಾರೆಸಾಗಿಸಿದ್ದಾರೆ ಎಂದು ಟ್ವೀಟ್ ಮಾಡಿದೆ.