ಧಾರವಾಡ : ಶ್ರೀರಾಮ ಸೇನೆ ನೇತೃತ್ವದಲ್ಲಿ ಜೂನ್ 9 ರಂದು ನಡೆಯಬೇಕಿದ್ದ ತ್ರಿಶೂಲ ದೀಕ್ಷಾ ಕಾರ್ಯಕ್ರಮ ಜೂನ್ 12 ಕ್ಕೆ ಮುಂದೂಡಲಾಗಿದೆ ಎಂದು ಶ್ರೀ ರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ನಡೆಯಲಿರುವ ಹಿನ್ನಲೆಯಲ್ಲಿ ತ್ರಿಶೂಲ ದೀಕ್ಷಾ ಕಾರ್ಯಕ್ರಮ ಮುಂದೂಡಲಾಗಿದೆ ಎಂದು ಸ್ಪಷ್ಟಪಡಿಸಿದರು.
Google Search: ಒಂಟಿಯಾಗಿರುವಾಗ Googleನಲ್ಲಿ ಯುವತಿಯರು ಅತಿ ಹೆಚ್ಚು ಹುಡುಕಾಟ ನಡೆಸುವುದೇನು ಗೊತ್ತಾ..?
ತ್ರಿಶೂಲ ದೀಕ್ಷಾ ಕಾರ್ಯಕ್ರಮವನ್ನು ರಾಜ್ಯದಲ್ಲಿ ಹೆಣ್ಣುಮಕ್ಕಳಿಗೆ ದೈರ್ಯ ತುಂಬಲು ಹಾಗೂ ಅವರಲ್ಲಿ ಆತ್ಮವಿಶ್ವಾಸ ಹೆಚ್ಚಿಸುವ ನಿಟ್ಟಿನಲ್ಲಿ ಶ್ರೀರಾಮ ಸೇನೆ ಹೆಣ್ಣು ಮಕ್ಕಳಿಗೆ ತ್ರಿಶೂಲ ದೀಕ್ಷಾ ನೀಡಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಎಂದು ಶ್ರೀ ರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ ತಿಳಿಸಿದರು.