ಬೆಂಗಳೂರು/ನವದೆಹಲಿ:- ಕೇಂದ್ರ ಸಚಿವರಾಗಿ ಎಚ್ ಡಿ ಕುಮಾರಸ್ವಾಮಿ ಅವರು ಅಧಿಕಾರ ಸ್ವೀಕಾರ ಮಾಡಿದ್ದಾರೆ.
ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮೋದಿ ಸಂಪುಟದಲ್ಲಿ ಸ್ಥಾನ ಪಡೆದ ಎಚ್ ಡಿ ಕುಮಾರಸ್ವಾಮಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
#WATCH | JD(S) leader HD Kumaraswamy sworn in as Union Minister in the Prime Minister Narendra Modi-led NDA government pic.twitter.com/N5zBWhppLz
— ANI (@ANI) June 9, 2024
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ (HD Deve Gowda) ಅವರಂತೆ ಮಣ್ಣಿನ ಮಗ ಎನಿಸಿಕೊಂಡಿರುವ, ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಗೆಲುವು ಸಾಧಿಸಿ ಸಂಸತ್ ಪ್ರವೇಶಿಸಿರುವ ಹರದನಹಳ್ಳಿ ದೇವೇಗೌಡ ಕುಮಾರಸ್ವಾಮಿ ಅರ್ಥಾತ್ ಎಚ್.ಡಿ.ಕುಮಾರಸ್ವಾಮಿ (HD Kumaraswamy) ಅವರೀಗ ನರೇಂದ್ರ ಮೋದಿ (Narendra Modi) ಅವರ ಸಚಿವ ಸಂಪುಟದಲ್ಲಿ ಸ್ಥಾನ ಪಡೆದಿದ್ದಾರೆ. ಹರದನಹಳ್ಳಿಯಲ್ಲಿ ಜನಿಸಿ, ಸಿನಿಮಾ ನಿರ್ಮಾಪಕರಾಗಿ, ಶಾಸಕರಾಗಿ, ವಿಧಾನಸಭೆ ಪ್ರತಿಪಕ್ಷ ನಾಯಕನಾಗಿ, ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ್ದ ಕುಮಾರಸ್ವಾಮಿ ಅವರೀಗ ಕೇಂದ್ರ ಸಚಿವರಾಗುವ ಮೂಲಕ ರಾಜಕೀಯ ಜೀವನದಲ್ಲಿ ಮತ್ತೊಂದು ಮೈಲುಗಲ್ಲು ಸಾಧಿಸಿದ್ದಾರೆ.