ನರೇಂದ್ರ ಮೋದಿ 3ನೇ ಭಾರಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಮೋದಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ಈ ವೇಳೆ ನಟರಾದ ರಜನಿಕಾಂತ್, ಶಾರುಖ್ ಖಾನ್, ಅಕ್ಷಯ್ ಕುಮಾರ್ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ಈ ವೇಳೆ ನಟರಾದ ಶಾರುಖ್ ಖಾನ್ ಹಾಗೂ ಅಕ್ಷಯ್ ಕುಮಾರ್ ತಬ್ಬಿಕೊಂಡಿದ್ದು ಈ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.
ನರೇಂದ್ರ ಮೋದಿ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರ ಕಾರ್ಯಕ್ರಮಕ್ಕೆ ಹಲವು ನಟ, ನಟಿಯರಿಗೆ ಆಹ್ವಾನ ನೀಡಲಾಗಿತ್ತು. ಅಂತೆಯೇ ಬಾಲಿವುಡ್ ಸ್ಟಾರ್ಗಳಾದ ಶಾರುಖ್ ಖಾನ್, ಅಕ್ಷಯ್ ಕುಮಾರ್, ಕಂಗನಾ ರಣಾವತ್, ಅನುಪಮ್ ಖೇರ್, ವಿಕ್ರಾಂತ್, ಬಾಲಿವುಡ್ ನಿರ್ಮಾಪಕ ರಾಜ್ಕುಮಾರ್ ಹಿರಾನಿ, ರಜನಿಕಾಂತ್, ಪವನ್ ಕಲ್ಯಾಣ್ ಸೇರಿದಂತೆ ಹಲವರು ಭಾಗಿಯಾಗಿ ಮೋದಿಗೆ ಶುಭ ಹಾರೈಸಿದರು.
ಶಾರುಖ್ ಖಾನ್ ಅವರು ಮುಖೇಶ್ ಅಂಬಾನಿ ಮತ್ತು ಅನಂತ್ ಅಂಬಾನಿ ಅವರ ಜೊತೆ ಆಗಮಿಸಿದರು. ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರವನ್ನು ನೋಡಲು ಬಂದಿದ್ದ ಅಕ್ಷಯ್ ಕುಮಾರ್ ಹಾಗೂ ಶಾರುಖ್ ಖಾನ್ ಅವರು ಪರಸ್ಪರ ಭೇಟಿಯಾದರು. ಅವರಿಬ್ಬರು ತಬ್ಬಿಕೊಂಡ ಕ್ಷಣವನ್ನು ಅತ್ಯುತ್ತಮ ಕ್ಷಣ ಎಂದು ಅಭಿಮಾನಿಗಳು ಬಣ್ಣಿಸುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋ ವೈರಲ್ ಆಗಿದೆ.
ಜೊತೆಗೆ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಕೂಡ ಸೋಷಿಯಲ್ ಮೀಡಿಯಾದಲ್ಲಿ ನರೇಂದ್ರ ಮೋದಿ 3ನೇ ಬಾರಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವುದ್ದಕ್ಕೆ ಶುಭಕೋರಿದ್ದಾರೆ. ಸಂತಸ ವ್ಯಕ್ತಪಡಿಸಿದ್ದಾರೆ.