ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಹಾಲಿ ಇರುವ ಸಿಂಹ, ಹುಲಿ ಸಫಾರಿಯ ಜೊತೆಗೆ ಜೂನ್ ಮಾಸಾಂತ್ಯದೊಳಗೆ ಚಿರತೆ ಸಫಾರಿ ಆರಂಭಿಸಲು ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ಸೂಚನೆ ನೀಡಿದ್ದಾರೆ. ವಿಕಾಸ ಸೌಧದ ಸಚಿವರ ಕಾರ್ಯಾಲಯದಲ್ಲಿ ನಡೆದ ಮೃಗಾಲಯ ಪ್ರಾಧಿಕಾರದ 156ನೇ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ರಾಜ್ಯದಲ್ಲಿರುವ ವಿವಿಧ ಮೃಗಾಲಯಗಳಿಗೆ ಪ್ರವಾಸಿಗರನ್ನು ಹೆಚ್ಚು ಸೆಳೆಯಲು ಮತ್ತು ಆದಾಯ ಹೆಚ್ಚಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಪರಾಮರ್ಶಿಸಿದರು.
ಮೈಸೂರು ಶ್ರೀ ಚಾಮರಾಜೇಂದ್ರ ಮಾಲಯ ಹಾಗೂ ಕಾರಂಜಿ ಕೆರೆ ಮಧ್ಯ ಭಾಗದಲ್ಲಿ ಸಾರ್ವಜನಿಕ, ಖಾಸಗಿ ಪಾಲುದಾರಿಕೆ (ಪಿಪಿಪಿ) ಮಾದರಿಯಲ್ಲಿ ಅಕ್ವೇರಿಯಂ (ಮತ್ಸ್ಯಾಗಾರ) ನಿರ್ಮಿಸಲು, ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲು ಸಮಾಲೋಚನಾ ಸಂಸ್ಥೆ ಆಯ್ಕೆ ಮಾಡಲು 15 ದಿನಗಳ ಒಳಗಾಗಿ ಪ್ರಸ್ತಾವನೆ ಮಂಡಿಸಲು ಸೂಚಿಸಲಾಯಿತು.
Robbery Case: ಸಿಲಿಕಾನ್ ಸಿಟಿಯಲ್ಲಿ ಬಿಡು ಬಿಟ್ಟ ತುಪ್ಪ ಕದಿಯೋ ಗ್ಯಾಂಗ್..! ಸೂಪರ್ ಮಾರ್ಕೆಟ್ʼಗಳೆ ಇವರ ಟಾರ್ಗೆಟ್
ಮೈಸೂರು ಮೃಗಾಲಯ ಮತ್ತು ಕಾರಂಜಿ ಕೆರೆ ಪ್ರಕೃತಿ ಉದ್ಯಾನದಲ್ಲಿ ಕ್ಯಾಮೆರಾ ಕಾಂಬೋ ಟಿಕೆಟ್ ಪರಿಚಯಿಸಿ, ಸ್ಥಿರ ಕ್ಯಾಮರಾಗೆ 150 ರೂ. ಮತ್ತು ವಿಡಿಯೋ ಕ್ಯಾಮರಾಗೆ 300 ರೂ. ದರ ವಿಧಿಸಲು ಅನುಮತಿಸಲಾಯಿತು. ಅದೇ ರೀತಿ ಬನ್ನೇರುಘಟ್ಟ ರಾಷ್ಟ್ರೀಯ ಜೈವಿಕ ಉದ್ಯಾನವನದಲ್ಲಿ ಪಿಪಿಪಿ ಮಾದರಿಯಲ್ಲಿ ಸಿಹಿ ನೀರು ಮತ್ತು ಉಪ್ಪು ನೀರಿನ ಮತ್ಸ್ಯಾಗಾರಗಳನ್ನು ನಿರ್ಮಿಸಲು ಈಗಾಗಲೇ ನಡೆದಿರುವ ಪರಿಕಲ್ಪನೆ ಅಧ್ಯಯನ ವರದಿ ಮತ್ತು ಕಾರ್ಯಸಾಧ್ಯತೆ ವರದಿ ಪರಿಶೀಲಿಸಿ ಜಾಗತಿಕ ಮಾನದಂಡಗಳ ರೀತ್ಯ ಮತ್ಸ್ಯಾಗಾರ ನಿರ್ಮಾಣಕ್ಕೆ ಅನುಮೋದನೆ ನೀಡಲಾಯಿತು.