ಬೆಂಗಳೂರು:- ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ SPP ರಾಜೀನಾಮೆ ನೀಡಿದ್ದಾರೆ.
Supreme Court: ನೀಟ್ ಅಕ್ರಮ ಆರೋಪ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ ಸುಪ್ರೀಂ ನೋಟಿಸ್
ಪ್ರಜ್ವಲ್ ರ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದ ಪರವಾಗಿ ಕೋರ್ಟ್ನಲ್ಲಿ ವಾದಿಸಲು ರಾಜ್ಯ ಸರ್ಕಾರ ಜಾಯ್ನಾ ಕೊಥಾರಿ ಅವರನ್ನು ಹೆಚ್ಚುವರಿ ಎಸ್ಪಿಪಿಯಾಗಿ ನೇಮಕ ಮಾಡಿತ್ತು. ಇತ್ತೀಚೆಗಷ್ಟೇ ಇದೇ ಪ್ರಕರಣಕ್ಕೆ ರಾಜ್ಯ ಸರ್ಕಾರ ನೇಮಿಸಿದ್ದ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಬಿಎನ್ ಜಗದೀಶ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಜಾಯ್ನಾ ಕೊಥಾರಿ ಅವರು ಇಂದು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದು, ಅಚ್ಚರಿಗೆ ಕಾರಣವಾಗಿದೆ.
ಪ್ರಜ್ವಲ್ ರೇವಣ್ಣ ಪ್ರಕರಣಗಳಲ್ಲಿ ವಿಶೇಷ ತನಿಖಾ ತಂಡ (SIT) ಪರ ವಾದಿಸಲು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ (SPP) ಆಗಿ ಬಿಎನ್ ಜಗದೀಶ ಅವರನ್ನು ರಾಜ್ಯ ಸರ್ಕಾರ ನೇಮಿಸಿತ್ತು. ಬಳಿಕ ವಿಚಾರಣಾ ನ್ಯಾಯಾಲಯ ಮತ್ತು ಸೆಷನ್ಗಳ ಮುಂದೆ ಪ್ರಾಸಿಕ್ಯೂಷನ್ನ್ನು ಸಮರ್ಥಿಸಲು ರಾಜ್ಯ ಸರ್ಕಾರವು, ಹಿರಿಯ ವಕೀಲರಾದ ಅಶೋಕ್ ಎನ್ ನಾಯಕ್ ಮತ್ತು ಜಾಯ್ನಾ ಕೊಥಾರಿ ಅವರನ್ನು ಹೆಚ್ಚುವರಿ ಎಸ್ಪಿಪಿಗಳಾಗಿ ಸರ್ಕಾರ ನೇಮಿಸಿತ್ತು. ಇದರ ಬೆನ್ನಲ್ಲೇ ಬಿಎನ್ ಜಗದೀಶ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು