ಬೆಂಗಳೂರು: ಚಿತ್ರದುರ್ಗದ ರೇಣುಕ ಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ಅವರನ್ನು ಬಂಧಿಸಲಾಗಿದೆ. ಪವಿತ್ರಾ ಗೌಡ ಅವರು ಎ1 ಆರೋಪಿ ಎನಿಸಿಕೊಂಡರೆ, ದರ್ಶನ್ ಎ2 ಆರೋಪಿ ಆಗಿದ್ದಾರೆ. ಸದ್ಯ ಅವರನ್ನು ಆರು ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಈ ಘಟನೆ ಸಂಬಂಧ ಗೃಹ ಸಚಿವ ಜಿ.ಪರಮೇಶ್ವರ್ ಸದಾಶಿವನಗರದಲ್ಲಿ ಮಾತನಾಡಿದ್ದಾರೆ. ಕಾನೂನನ್ನು ಯಾರೂ ಕೈಗೆತ್ತಿಕೊಳ್ಳಬಾರದು.
ಕಾನೂನು ಎಲ್ಲರಿಗೂ ಒಂದೇ. ದರ್ಶನ್ ಈ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದಡಿ ಅಧಿಕಾರಿಗಳು ಕರೆದುಕೊಂಡು ಬಂದಿದ್ದಾರೆ. ಅವರನ್ನೀಗ ಅರೆಸ್ಟ್ ಮಾಡಿ, ತನಿಖೆ ಮುಂದುವರಿಸಿದ್ದಾರೆ. ತನಿಖೆಯಲ್ಲಿ ಏನು ವಿಚಾರ ಬರಲಿದೆಯೋ ಅದರ ಮೇಲೆ ಪೊಲೀಸರು ಕ್ರಮ ತೆಗೆದುಕೊಳ್ಳಲಿದ್ದಾರೆ ಎಂದು ತಿಳಿಸಿದರು.
Causes Of Snoring: ಸಿಕ್ಕಾಪಟ್ಟೆ ಗೊರಕೆ ಹೊಡೆಯುತ್ತೀರಾ.? ಹಾಗಾದ್ರೆ ಇದೇ ನೋಡಿ ಕಾರಣ.?
ಆ ಹುಡುಗ ರೇಣುಕಾಸ್ವಾಮಿ, ದರ್ಶನ್ ಗೆಳತಿ ಬಗ್ಗೆ ಸೋಷಿಯಲ್ ಮೀಡಿಯಾದಲ್ಲೇನೋ ಪೋಸ್ಟ್ (ಕಾಮೆಂಟ್) ಮಾಡಿದ್ದ. ಅದರ ಬಗ್ಗೆ ಅವರು ದೂರು ಕೊಡಬಹುದಿತ್ತು. ಪೊಲೀಸರು ತಕ್ಷಣ ಕ್ರಮ ತೆಗೆದುಕೊಳ್ಳುತ್ತಿದ್ದರು. ಆದರೆ ಅವರನ್ನು ಕರೆದುಕೊಂಡು ಬಂದು ಹೊಡೆದು ಸಾಯಿಸಿದ್ದಾರೆ ಎಂಬ ಮಾಹಿತಿ ಇದೆ. ಹೀಗಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕಾನೂನು ರೀತಿಯಲ್ಲಿ ಏನು ಕ್ರಮ ತೆಗೆದುಕೊಳ್ಳಬೇಕೋ ಅದನ್ನು ಪೊಲೀಸರು ತೆಗೆದುಕೊಳ್ಳುತ್ತಾರೆ ಎಂದು ಪರಮೇಶ್ವರ್ ತಿಳಿಸಿದರು.