ಬೆಂಗಳೂರು: ಪವಿತ್ರಾಗೆ ಗುಪ್ತಾಂಗದ ಫೋಟೋ ಕಳುಹಿಸಿ ದರ್ಶನ್ಗಿಂತ ನಾನೇನು ಕಡಿಮೆ ಬಾ ಎಂದು ಮೃತ ವ್ಯಕ್ತಿ ರೇಣುಕಾ ಸ್ವಾಮಿ ಕರೆದಿದ್ದ ಸಂಗತಿ ಇದೀಗ ಬಯಲಾಗಿದೆ. ದರ್ಶನ್ ಹಾಗೂ ವಿಜಯಲಕ್ಷ್ಮಿ ದಾಂಪತ್ಯದಲ್ಲಿ ಪವಿತ್ರಾ ಗೌಡ ಎಂಟ್ರಿ ಆಗಿದ್ದಾರೆ ಎನ್ನುವ ಮಾತಿದೆ.
ಈ ವಿಚಾರದಲ್ಲಿ ಪವಿತ್ರಾ ಹಾಗೂ ವಿಜಯಲಕ್ಷ್ಮಿ ಮಧ್ಯೆ ಕಿರಿಕ್ ಆಗಿತ್ತು. ಸೋಶಿಯಲ್ ಮೀಡಿಯಾದಲ್ಲಿ ಇವರು ಓಪನ್ ಆಗಿ ಕಿತ್ತಾಡಿಕೊಂಡಿದ್ದರು. ದರ್ಶನ್ ಹಾಗೂ ವಿಜಯಲಕ್ಷ್ಮಿ ಸಂಸಾರ ಚೆನ್ನಾಗಿರಬೇಕು ಎಂದು ಬಯಸಿದ ರೇಣುಕಾಸ್ವಾಮಿ ಅವರು ಪವಿತ್ರಾಗೆ ಅಶ್ಲೀಲ ಸಂದೇಶ ಕಳುಹಿಸಿದ್ದರು.
ಮಲಗುವ ಮುನ್ನ ಒಂದು ಲೋಟ ಜಾಯಿಕಾಯಿ ಹಾಕಿದ ಹಾಲನ್ನು ಕುಡಿಯಿರಿ ಸಾಕು. ! ಆಮೇಲೆ ಚಮತ್ಕಾರ ನೋಡಿ
ಕೊಲೆಯಾದ ರೇಣುಕ ಸ್ವಾಮಿ ಫೆಬ್ರವರಿ 27ರಿಂದ ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡೋಕೆ ಶುರು ಮಾಡಿದ್ದರು. ಅಕೌಂಟ್ ಬ್ಲಾಕ್ ಮಾಡಿದರೂ ಹೊಸ ಅಕೌಂಟ್ ಓಪನ್ ಮಾಡಿ ಅಶ್ಲೀಲವಾಗಿ ಮಸೇಜ್ ಕಳುಹಿಸುತ್ತಿದ್ದ. ಕಳೆದ ಶುಕ್ರವಾರ ಮರ್ಮಾಂಗದ ಫೋಟೋ ಕಳುಹಿಸಿ ‘ದರ್ಶನ್ಗಿಂತ ನಾನೇನು ಕಡಿಮೆ ಬಾ’ ಎಂದು ಹೇಳಿದ್ದ. ಇದರಿಂದ ಪವಿತ್ರಾ ಸಾಕಷ್ಟು ಚಿಂತೆಗೆ ಒಳಗಾಗಿದ್ದರು.
ರೇಣುಕಾ ಸ್ವಾಮಿಯ ವಿಕೃತಿಯನ್ನು ಮನೆಗೆಲಸದವನಾದ ಪವನ್ಗೆ ಪವಿತ್ರಾ ಗೌಡ ಹೇಳಿದ್ದರು. ‘ಯಾವುದೇ ಕಾರಣಕ್ಕೂ ದರ್ಶನ್ಗೆ ಹೇಳಬೇಡ. ಅವನು ಏನಾದ್ರು ಮಾಡಿಬಿಡ್ತಾನೆ’ ಎಂದು ಪವನ್ಗೆ ಕಿವಿಮಾತು ಕೂಡ ಹೇಳಿದ್ದರು. ಆದರೆ, ಪವನ್ ಬಾಯಲ್ಲಿ ಹೆಚ್ಚು ಹೊತ್ತು ಈ ಗುಟ್ಟು ನಿಲ್ಲಲಿಲ್ಲ. ಅವನು ದರ್ಶನ್ಗೆ ವಿಚಾರ ತಿಳಿಸಿದ್ದ. ಆಮೇಲೆ ದರ್ಶನ್ ಹಾಗೂ ಗ್ಯಾಂಗ್ ರೇಣುಕಾ ಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿದರು. ಆ ಬಳಿಕ ಹಲ್ಲೆ ನಡೆಸಿ, ಕೊಲೆ ಮಾಡಲಾಯಿತು ಎನ್ನಲಾಗಿದೆ.