ಬೆಂಗಳೂರು: ಏಪ್ರಿಲ್.1, 2019ಕ್ಕಿಂತ ಮೊದಲು ನೋಂದಾಯಿಸಿಕೊಂಡ ವಾಹನಗಳಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸೋದು ಕಡ್ಡಾಯವಾಗಿದೆ. HSRP ನಂಬರ್ ಪ್ಲೇಟ್ ಅಳವಡಿಕೆಗೆ ಸಾಕಷ್ಟು ಅವಕಾಶಗಳನ್ನು ನೀಡಲಾಗಿತ್ತು. ಆದರೆ ಲಕ್ಷಾಂತರ ವಾಹನಗಳು ನಂಬರ್ ಪ್ಲೇಟ್ ಬದಲಾವಣೆ ಮಾಡಿಕೊಂಡಿಲ್ಲ. ಆದ್ರೆ ರಾಜ್ಯದಲ್ಲಿ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ ಅಳವಡಿಕೆಗೆ ಈಗಾಗಲೇ ಎರಡ್ಮೂರು ಬಾರಿ ಅವಧಿ ವಿಸ್ತರಣೆ ಮಾಡಿದ್ದು, ಜೂನ್ 12ಕ್ಕೆ ಡೆಡ್ಲೈನ್ ಕೊನೆಗೊಂಡಿದೆ.
ಆದರೆ, ಇನ್ನೂ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸದವರಿಗೆ ಕರ್ನಾಟಕ ಹೈಕೋರ್ಟ್ ಸಿಹಿ ಸುದ್ದಿ ನೀಡಿದೆ. ಹೆಚ್ಎಸ್ಆರ್ಪಿ ಅಳವಡಿಸದವರ ವಿರುದ್ಧ ಜುಲೈ 4ರ ವರೆಗೆ ಯಾವುದೇ ಕ್ರಮಗಳನ್ನು ಕೈಗೊಳ್ಳದಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಅಲ್ಲದೆ, ಹೆಚ್ಎಸ್ಆರ್ಪಿ ಅಳವಡಿಕೆಯ ಗಡುವನ್ನು ವಿಸ್ತರಿಸಲು ಒಪ್ಪಿಗೆ ನೀಡಿದೆ.
ನಿಮಗೆ ಗೊತ್ತೇ..? ಹುಣಸೆ ಹಣ್ಣಿನ ಹುಳಿಗಿದೆ ಸೌಂದರ್ಯವನ್ನು ದುಪ್ಪಟ್ಟು ಮಾಡುವ ಪವರ್.!
ಗಡುವು ವಿಸ್ತರಣೆಗೆ ವಿನಂತಿಸಿ ಬಿಎನ್ಡಿ ಎನರ್ಜಿ ಲಿಮಿಟೆಡ್ ಮತ್ತು ಇತರರು ಸಲ್ಲಿಸಿದ ಮೇಲ್ಮನವಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್ವಿ ಅಂಜಾರಿಯಾ ಅವಧಿ ವಿಸ್ತರಣೆಗೆ ಅನುಮತಿ ನೀಡಿದ್ದಾರೆ. ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆಯ ಅನುಷ್ಠಾನಕ್ಕೆ ಮೇ 31 ರ ಗಡುವು ನಿಗದಿಪಡಿಸಲಾಗಿತ್ತು ಎಂದು ರಾಜ್ಯ ಹೆಚ್ಚುವರಿ ಅಡ್ವೊಕೇಟ್ ಜನರಲ್ ವಿಕ್ರಂ ಹುಯಿಲಗೋಳ ವಿವರಿಸಿದರು.
ಆದರೆ, ಜೂನ್ 12ರವರೆಗೆ ಹೆಚ್ಎಸ್ಆರ್ಪಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಯಾವುದೇ ಕ್ರಮಗಳು ಅಥವಾ ನಿರ್ಧಾರಗಳನ್ನು ತೆಗೆದುಕೊಳ್ಳಬಾರದು ಎಂದು ಹೈಕೋರ್ಟ್ನ ರಜಾಕಾಲದ ಪೀಠವು ಈ ಹಿಂದೆ ಮೇ 21 ರಂದು ಆದೇಶಿಸಿತ್ತು. ಇದು ಗಡುವು ವಿಸ್ತರಿಸಿ ಅಧಿಸೂಚನೆ ಹೊರಡಿಸದಂತೆ ಸರ್ಕಾರವನ್ನು ತಡೆದಿತ್ತು.