ನಟ ದರ್ಶನ್ ಅವರು ಪೊಲೀಸರ ಅತಿಥಿ ಆಗಿದ್ದಾರೆ. ಚಿತ್ರದುರ್ಗದ ರೇಣುಕ ಸ್ವಾಮಿ ಕೊಲೆ ಕೇಸ್ನಲ್ಲಿ ಅವರನ್ನು ಬಂಧಿಸಲಾಗಿದೆ. ಪವಿತ್ರಾ ಗೌಡ ಅವರು ಎ1 ಆರೋಪಿ ಎನಿಸಿಕೊಂಡರೆ, ದರ್ಶನ್ ಎ2 ಆರೋಪಿ ಆಗಿದ್ದಾರೆ. ಸದ್ಯ ಅವರನ್ನು ಆರು ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಶಾಮಿಯಾನ ಹೊದಿಸುವಂತೆ ಪೊಲೀಸ್ ಆಯುಕ್ತ ದಯಾನಂದ್ ಸೂಚನೆ ನೀಡಿದ್ದಾರೆ.
ಅದರಂತೆ ಠಾಣೆಯ ಸುತ್ತ ಸೈಡ್ ವಾಲ್ ಗಳನ್ನ ಕಟ್ಟಿ, ಆರೋಪಿಗಳು ಕಾಣದಂತೆ ಮಾಡಲಾಗಿದೆ. ಸದ್ಯ ಆಯುಕ್ತರು ಕೂಡ ಪೊಲೀಸ್ ಠಾಣೆಯಲ್ಲಿಯೇ ಇದ್ದಾರೆ. ಜೊತೆಗೆ ಠಾಣೆಯ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಿನ್ನೆಯವರೆಗೆ ಅಭಿಮಾನಿಗಳು ಠಾಣೆಯ ಮುಂದೆ ಜಮಾಯಿಸಿದ್ದರು. ಈ ವೇಳೆ ಠಾಣೆ ಮುಂದೆ ಬ್ಯಾರಿಕೇಡ್ಗಳನ್ನು ಹಾಕಿದ್ದರು.
ನಿಮಗೆ ಗೊತ್ತೇ..? ಹುಣಸೆ ಹಣ್ಣಿನ ಹುಳಿಗಿದೆ ಸೌಂದರ್ಯವನ್ನು ದುಪ್ಪಟ್ಟು ಮಾಡುವ ಪವರ್.!
ಆದರೆ ಇಂದು ಅಭಿಮಾನಿಗಳು ಕೂಡ ಠಾಣೆಯತ್ತ ಸುಳಿದಿಲ್ಲ. ಆದರೂ ಠಾಣೆಯ ಕಾಂಪೌಂಡ್ಗೆ ಶಾಮಿಯಾನ ಕಟ್ಟಿದ್ದು, ಭಾರೀ ಅನುಮಾನ ಹುಟ್ಟಿಸಿದೆ. ಮೊನ್ನೆ ಆರೋಪಿಗಳಿಗೆ ಠಾಣೆ ಒಳಗೆ ಬಿರಿಯಾನಿ ಕೊಟ್ಟಿದ್ದರು ಎಂದು ಹೇಳಲಾಗುತ್ತಿತ್ತು. ಈ ಬೆನ್ನಲ್ಲೇ ಇಂದು ಶಾಮಿಯಾನದಿಂದ ಮುಚ್ಚಿರುವುದು ಠಾಣೆ ಒಳಗಡೆ ಆರೋಪಿಗಳಿಗೆ ರಾಜಮರ್ಯಾದೆ ಕೊಡಲಾಗುತ್ತಿದೆಯಾ..? ಇವುಗಳನ್ನು ಮಾಧ್ಯಮಗಳಿಂದ ಮುಚ್ಚಿಡಲು ಈ ರೀತಿ ಮಾಡಲಾಗುತ್ತಿದೆಯಾ ಎಂಬ ಪ್ರಶ್ನೆ ಎದ್ದಿದೆ.