ಬೆಂಗಳೂರು:- ಯಡಿಯೂರಪ್ಪರನ್ನ ಹೆಚ್ಚು ಕೆಣಕಬೇಡಿ, ಕಾಂಗ್ರೆಸ್ ನಿರ್ನಾಮ ಗ್ಯಾರಂಟಿ ಎಂದು ಬಿಜೆಪಿ ಹೇಳಿದೆ.
ನಿಮಗೊತ್ತಾ.. ಏಲಿಯನ್ಗಳು ನಮ್ಮ ನಡುವೆ ಮನುಷ್ಯರಂತೆಯೇ ಜೀವಿಸುತ್ತಿರಬಹುದು…!
ಯಡಿಯೂರಪ್ಪ ವಿರುದ್ಧ ಫೋಕ್ಸೋ ಕುರಿತಾಗಿ ಟ್ವೀಟ್ ಮಾಡಿರುವ ಬಿಜೆಪಿ, ಮಾನಸಿಕ ಅಸ್ವಸ್ಥೆ ಸ್ವತಃ ತನ್ನ ಮಕ್ಕಳು ಹಾಗೂ ಗಂಡನ ವಿರುದ್ಧವೇ ದೂರು ನೀಡಿರುವುದೂ ಸೇರಿದಂತೆ 53 ಜನರ ವಿರುದ್ಧದ ದೂರುಗಳಲ್ಲಿ ಯಡಿಯೂರಪ್ಪನವರ ಪ್ರಕರಣಕ್ಕೇ ಸರ್ಕಾರ ವಿಶೇಷ ಒತ್ತು ನೀಡಿದ್ದು ಏಕೆ? ಪ್ರಕರಣ ದಾಖಲಾಗಿ 3 ತಿಂಗಳಾದ ಮೇಲೆ ದಿಢೀರ್ ಬಂಧನ ಮಾಡುವ ಸಂಚು ರೂಪಿಸಿದ್ದು ಏಕೆ? ಕಾಂಗ್ರೆಸ್ಸಿನ ದೆಹಲಿ ನಾಯಕರ ನೀಚ ದ್ವೇಷ ರಾಜಕಾರಣಕ್ಕೆ ಕಟ್ಟುಬಿದ್ದು ಯಡಿಯೂರಪ್ಪನವರನ್ನು ಕೆಣಕಲು ಹೋದರೆ ಕರ್ನಾಟಕದಲ್ಲಿ ಕಾಂಗ್ರೆಸ್ ನಿರ್ನಾಮವಾಗುವುದರಲ್ಲಿ ಸಂಶಯವೇ ಇಲ್ಲ ಎಂದು ವಾಗ್ದಾಳಿ ಮಾಡಿದೆ.