ದಾವಣಗೆರೆ:- ಏಳು ಜನರು ಸೇರಿ ಯುವಕನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಐವರನ್ನು ಪೊಲೀಸರು ಬಂಧಿಸಿದ ಘಟನೆ ಜಿಲ್ಲೆಯ ಹರಿಹರ ನಗರದ ಬೆಂಕಿನಗರದ ಮದರಸಾ ಬಳಿ ಖಾಲಿಕೊಠಡಿಯಲ್ಲಿ ಜರುಗಿದೆ.
ಮಹಮ್ಮದ್ (24) ಎಂಬಾತನನ್ನು ರೂಮ್ನಲ್ಲಿ ಕೂಡಿ ಹಾಕಿ ಹಲ್ಲೆ ಮಾಡಿದ್ದು, ನಂತರ ತಲೆ ಬೋಳಿಸಲಾಗಿತ್ತು. ಈ ಘಟನೆಯಲ್ಲಿ ಯುವಕನಿಗೆ ಹೊಡೆಯುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಹರಿಹರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಹಲ್ಲೆಗೊಳಗಾದ ಯುವಕ ಅಲ್ಲಿದ್ದ ಕೆಲ ಮಹಿಳೆಯರ ಫೋಟೋ, ವಿಡಿಯೋ ಮಾಡಿಟ್ಟುಕೊಂಡಿದ್ದ ಎಂಬ ಆರೋಪ ಕೇಳಿಬಂದಿದೆ. ಸದ್ಯ ಹಲ್ಲೆಗೊಳಗಾದ ಯುವಕನ ಮೊಬೈಲ್ ವಶ ಪಡಿಸಿಕೊಳ್ಳಲಾಗಿದೆ. ಸಂತ್ರಸ್ಥ ಮಹಿಳೆಯರು ಅಧಿಕೃತ ದೂರು ಕೊಟ್ಟರೆ ಯುವಕನ ವಿರುದ್ಧ ಸಹ ಕ್ರಮ ಕೈಗೊಳ್ಳಲಾಗತ್ತೆ.