ಬೆಂಗಳೂರು:– ಫೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪಗೆ ಬಂಧನ ಭೀತಿ ಎದುರಾಗಿದ್ದು ಕೋರ್ಟ್ನಿಂದ ಜಾಮೀನುರಹಿತ ವಾರಂಟ್ ಜಾರಿಯಾಗಿದೆ.
ಪ್ರಕರಣಕ್ಕೆ ಸಂಬಂಧಿಸಿ ಜೂನ್ 15ರೊಳಗೆ ಚಾರ್ಜ್ಶೀಟ್ ಸಲ್ಲಿಸಬೇಕಾಗಿತ್ತು. ಹೀಗಾಗಿ ಯಡಿಯೂರಪ್ಪನವರಿಗೆ ವಿಚಾರಣೆಗೆ ಬರುವಂತೆ ಸಿಐಡಿ ಪೊಲೀಸರು ನೊಟೀಸ್ ನೀಡಿದ್ದರು. ಆದರೆ ಇದಕ್ಕೆ ಯಡಿಯೂರಪ್ಪ ಜೂನ್ 17ರಂದು ವಿಚಾರಣೆಗೆ ಹಾಜರಾಗುವುದಾಗಿ ಪತ್ರ ಬರೆದಿದ್ದರು. ವಿಚಾರಣೆಗೆ ಬಿಎಸ್ವೈ ಹಾಜರಾಗದ ಹಿನ್ನೆಲೆ ಪೊಲೀಸರು ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ಗೆ ಅರ್ಜಿ ಸಲ್ಲಿಸಿ, BSY ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸುವಂತೆ ಮನವಿ ಮಾಡಿದ್ದರು.
ಈ ಮಧ್ಯೆ ಬಂಧನ ಭೀತಿಯಲ್ಲಿರೋ ಮಾಜಿ ಸಿಎಂ ಯಡಿಯೂರಪ್ಪ, ವಕೀಲರ ಮೂಲಕ ಹೈಕೋರ್ಟ್ಗೆ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ಕೋರ್ಟ್ನಲ್ಲಿಂದು ವಿಚಾರಣೆಗೆ ಬರೋ ಸಾಧ್ಯತೆ ಇದೆ. ಇನ್ನೂ ಕೋರ್ಟ್ ಜಾಮೀನು ರಹಿತ ವಾರಂಟ್ ಹೊರಡಿಸ್ತಿದ್ದಂತೆ, ಬಿಎಸ್ವೈ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ. ಬೆಂಗಳೂರಿನ ಡಾಲರ್ಸ್ ಕಾಲೋನಿಯ ಧವಳಗಿರಿ ನಿವಾಸ ಖಾಲಿ ಖಾಲಿಯಾಗಿದೆ.