ಗದಗ: ಉಪ ಲೋಕಾಯುಕ್ತರಾದ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ಜೂನ್ 14 ರಿಂದ 16 ರವರೆಗೆ ಗದಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದು ಇಂದು ಗದಗ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಅಹವಾಲುಗಳನ್ನ ಸ್ವೀಕಾರ ಮಾಡಿದ್ರು.
ಜೊತೆಗೆ ವಿಚಾರಣೆಗಳನ್ನೂ ಕೂಡಾ ನಡೆದಿದ್ರು. ಸಾರ್ವಜನಿಕರಿಗೆ ಆಗಬೇಕಾದ ಕೆಲಸಗಳು, ಸರ್ಕಾರಿ ಕಚೇರಿಗಳಲ್ಲಿ ವಿಳಂಬ ಸೇರಿದಂತೆ ಇತರೆ ಅಹವಾಲುಗಳನ್ನ ಪರಿಹರಿಸುವಂತೆ ಸ್ಥಳದಲ್ಲೇ ಅಧಿಕಾರಿಗಳಿಗೆ ತಾಕೀತು ಮಾಡಿದ್ರು.
ಅಧಿಕಾರಿಗಳಿಗೆ ಸಮಯಾವಕಾಶ ನೀಡಿ ಕೆಲಸಗಳನ್ನ ಮಾಡಲು ತಿಳಿಸಿದ್ರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ ಎಸ್ ನೇಮಗೌಡ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.