ಹುಬ್ಬಳ್ಳಿ:- ದರ್ಶನ್ ರನ್ನ ಕೃಷಿ ಇಲಾಖೆ ರಾಯಭಾರಿಯಾಗಿ ಮುಂದುವರಿಯಲು ಆಗಲ್ಲ ಎಂದು ಎಂಬಿ ಪಾಟೀಲ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ರೇಣುಕಾಸ್ವಾಮಿ ಹತ್ಯೆ ಪ್ರಕರಣ ಪಾರದರ್ಶಕವಾಗಿ ತನಿಖೆ ನಡೆಸಲಾಗುತ್ತಿದೆ. ದರ್ಶನ್ಗೆ ರಾಜಮರ್ಯಾದೆಯ ಪ್ರಶ್ನೆಯೇ ಇಲ್ಲ. ಆರೋಪಿ ಆರೋಪಿಯೇ, ಆರೋಪ ಸಾಬೀತಾದರೆ ಅವರಿಗೆ ಶಿಕ್ಷೆ ಆಗುತ್ತದೆ. ಇಂತಹ ಆರೋಪ ಎದುರಿಸುತ್ತಿರುವಾಗ ಅವರು ಕೃಷಿ ಇಲಾಖೆಯ ರಾಯಭಾರಿಯಾಗಿ ಮುಂದುವರಿಯಲು ಸಾಧ್ಯವಿಲ್ಲ ಎಂದಿದ್ದಾರೆ
ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್ ವಿಚಾರವಾಗಿ ಮಾತನಾಡಿ, ಇದರಲ್ಲಿ ಯಾವುದೇ ರಾಜಕೀಯ ದ್ವೇಷವಿಲ್ಲ. ಪೋಕ್ಸೋ ಕಾಯ್ದೆ ಅತ್ಯಂತ ಗಂಭೀರವಾದದ್ದು. ಅಪ್ರಾಪ್ತ ವಯಸ್ಸಿನ ಮಕ್ಕಳ ಮೇಲೆ ದೌರ್ಜನ್ಯವಾದರೆ ಈ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗುತ್ತದೆ. ಇದರಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಲು ಬರುವುದಿಲ್ಲ ಎಂದಿದ್ದಾರೆ.