ಬೆಂಗಳೂರು: ದರ್ಶನ್ ಪ್ರಕರಣದ ಬಗ್ಗೆ ನಾನು ಚರ್ಚೆ ಮಾಡಲ್ಲ ಎಂದು ಹೆಚ್.ಡಿ ಕುಮಾರಸ್ವಾಮಿ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ದರ್ಶನ್ ಪ್ರಕರಣದ ಬಗ್ಗೆ ನಾನು ಚರ್ಚೆ ಮಾಡಲ್ಲ. ಇವತ್ತು ಆ ರೀತಿಯ ಘಟನೆಗಳು ರಾಜ್ಯದಲ್ಲಿ ನಡೆಯುತ್ತಲೇ ಇವೆ. ದರ್ಶನ್ ಘಟನೆ ಒಂದು ಭಾಗ ಅಷ್ಟೇ. ಈ ಸರ್ಕಾರ ಬಂದ ನಂತರ ಪ್ರತಿದಿನ ಮಾನುಷ್ಯನ ಜೀವನದ ಬಗ್ಗೆ, ಜೀವ ತೆಗೆಯೋದ್ರಲ್ಲಿ ಭಯ ಭಕ್ತಿ ಹೊರಟು ಹೋಗಿದೆ.
ಅದಕ್ಕೆ ಕಾರಣ ಈ ಸರ್ಕಾರದ ಆಡಳಿತ. ಒಂದು ಘಟನೆಯನ್ನು ಯಾಕೆ ಮಾತಾಡಬೇಕು? ಎಂದು ಪ್ರಶ್ನೆ ಮಾಡಿದ್ದಾರೆ. ಇನ್ನೂ ವೈಯಕ್ತಿಕ ಕಾರಣದಿಂದ ಕೊಲೆ ಮಾಡುವುದು ರಾಜ್ಯದಲ್ಲಿ ಎಷ್ಟು ಸುಲಭವಾಗಿದೆ. ಇದಕ್ಕೆಲ್ಲ ರಾಜ್ಯ ಸರ್ಕಾರದ ನಡೆಯೇ ಕಾರಣ. ಪೊಲೀಸ್ ಅಧಿಕಾರಿಗಳೇ ಹಣದ ವ್ಯಾಮೋಹಕ್ಕೆ ಬಲಿಯಾಗಿದ್ದಾರೆ.
Virat Kohli Dating: ಅನುಷ್ಕಾ ಜೊತೆಗಿನ ಮದುವೆಗೂ ಮುನ್ನ 5 ಮಂದಿಯೊಂದಿಗೆ ಡೇಟಿಂಗ್ ಮಾಡಿದ್ದ ಕೊಹ್ಲಿ!
ಬರುವಾಗ ಕೊಟ್ಟು ಬಂದಿದ್ದನ್ನ ಸಂಪಾದನೆ ಮಾಡೋದಕ್ಕೆ ಹೀಗೆ ಮಾಡ್ತಿದ್ದಾರೆ. ಆಡಳಿತ ಸಂಪೂರ್ಣ ಕುಸಿದಿದೆ. ಶಾಮಿಯಾನ ಹಾಕೋ ಘಟನೆ ಇತಿಹಾದಲ್ಲಿ ಆಗಿರಲಿಲ್ಲ. ಯಥಾ ರಾಜಾ ತಥಾ ಪ್ರಜೆ ರೀತಿ ಈ ಸರ್ಕಾರದ ನಡವಳಿಕೆ ಆಗಿದೆ. ಈ ಸರ್ಕಾರಕ್ಕೆ ಏನಾದ್ರು ಕಿಂಚಿತ್ತೂ ಗೌರವ ಇದ್ದರೆ ಆಡಳಿತದಲ್ಲಿ ಸರಿಪಡಿಸಿಕೊಳ್ಳಲಿ ಎಂದು ತಿವಿದಿದ್ದಾರೆ.