ಬೆಂಗಳೂರು: ಹಾವೇರಿ – ಗದಗ ಲೋಕಸಭಾ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿ ಅವರು ಇಂದು ಶಿಗ್ಗಾವಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. ವಿಧಾನಸೌಧದ ಮೊದಲನೆ ಮಹಡಿಯಲ್ಲಿರುವ ಸ್ಪೀಕರ್ ಕಚೇರಿಯಲ್ಲಿ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ರಾಜೀನಾಮೆ ಸಲ್ಲಿಕೆ ಮಾಡಿದರು.
Virat Kohli Dating: ಅನುಷ್ಕಾ ಜೊತೆಗಿನ ಮದುವೆಗೂ ಮುನ್ನ 5 ಮಂದಿಯೊಂದಿಗೆ ಡೇಟಿಂಗ್ ಮಾಡಿದ್ದ ಕೊಹ್ಲಿ!
ಲೋಕಸಭಾ ಸದಸ್ಯರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಶಿಗ್ಗಾವಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ಬೊಮ್ಮಾಯಿ ರಾಜೀನಾಮೆ ನೀಡಿದರು. ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಿಂದ ಸತತ ನಾಲ್ಕು ಬಾರಿ ಜಯಭೇರಿ ಬಾರಿಸಿದ್ದ ಬೊಮ್ಮಾಯಿ ಇದೇ ಮೊದಲ ಬಾರಿಗೆ ಲೋಕಸಭೆಗೆ ಸ್ಪರ್ಧಿಸಿ ವಿಜಯಿಯಾಗಿದ್ದಾರೆ. ಎದುರಾಳಿಯಾಗಿ ಕಾಂಗ್ರೆಸ್ ಪಕ್ಷದಿಂದ ಕಣದಲ್ಲಿದ್ದ ಆನಂದಸ್ವಾಮಿ ಗಡ್ಡದೇವರಮಠ ವಿರುದ್ಧ ಅವರು ಗೆಲುವು ಸಾಧಿಸಿದ್ದಾರೆ.