ಹುಬ್ಬಳ್ಳಿ: ಬಿಎಸ್ ಯಡಿಯೂರಪ್ಪ ವಿರುದ್ಧದ ಪ್ರಕರಣದಲ್ಲಿ ಹೈಕೋರ್ಟ್ ಕರ್ನಾಟಕ ಸರ್ಕಾರಕ್ಕೆ ಕಪಾಳಮೋಕ್ಷ ಮಾಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಮೊದಲೇ ನೋಟಿಸ್ ಕೊಟ್ಟು, ಲೋಕಸಭಾ ಚುನಾವಣೆ ಮುಗಿದು ನಮ್ಮ ಸರ್ಕಾರ ಬಂದಿರುವ ಸಮಯದಲ್ಲಿ ಹೀಗೆ ಮಾಡಿದ್ದಾರೆ. ಯಡಿಯೂರಪ್ಪ ನಮ್ಮ ಪಕ್ಷದ ಹಿರಿಯ ನಾಯಕರು. ಸಂಸದೀಯ ಮಂಡಳಿ ಮೆಂಬರ್ ಆಗಿ ದೆಹಲಿಯಲ್ಲಿ ಇರುವುದು ಸಹಜ. ಅವರಿಗೆ ಜಾಮೀನು ರಹಿತ ವಾರೆಂಟ್ ಹೊರಡಿಸಿದ್ದು ತಪ್ಪು ಎಂದು ನ್ಯಾಯಾಲಯವೇ ಹೇಳಿದೆ. ರಾಜ್ಯ ಸರ್ಕಾರವೇ ಇದರ ಸೂತ್ರಧಾರಿ ಎಂದರು.
ಈ ಎಲ್ಲ ಬೆಳವಣಿಗೆಯ ನಂತರ ಇದು ರಾಹುಲ್ ಗಾಂಧಿ ಒತ್ತಡದ ಮೇಲೆ ನಡೆದಿದೆ ಎಂಬುದು ಸ್ಪಷ್ಟ. ಸಿದ್ದರಾಮಯ್ಯ ಖುರ್ಚಿ ಉಳಿಸಿಕೊಳ್ಳಲು ಅತ್ಯಂತ ಹಿರಿಯ ನಾಯಕ ಯಡಿಯೂರಪ್ಪರನ್ನು ಬಂಧಿಸುವ ಮೂಲಕ ಸೇಡಿನ ರಾಜಕಾರಣಕ್ಕೆ ಕಾಂಗ್ರೆಸ್ ಸರ್ಕಾರ ಮುಂದಾಗಿತ್ತು. ಆದರೆ, ದೇಶದಲ್ಲಿ ನ್ಯಾಯಾಂಗ ವ್ಯವಸ್ಥೆ ಬಲವಾಗಿದೆ ಎಂದು ಜೋಶಿ ಹೇಳಿದರು. ಧಾರವಾಡದಲ್ಲಿ ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು,
6 ತಿಂಗಳಲ್ಲಿ ನಿಮ್ಮ ಆದಾಯವನ್ನು ಹೆಚ್ಚಿಸುವ ಬೆಳ್ಳುಳ್ಳಿ ಬಗ್ಗೆ ಇಲ್ಲಿದೆ ಮಾಹಿತಿ.!
ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದ ಹಿಂದೂಗಳ ಮೇಲೆ ಹಲ್ಲೆಗಳಾಗುತ್ತಿವೆ. ಧಾರವಾಡದಲ್ಲಿ ಅಕ್ರಮವಾಗಿ ಗೋವು ಸಾಗಾಟ ಮಾಡುತ್ತಿದ್ದರು. ಆರೋಗ್ಯವಂತ ದೇಶಿ ಗೋವುಗಳ ಸಾಗಾಟ ಮಾಡುತ್ತಿದ್ದರು. ಹಲ್ಲೆ ಮಾಡಿರುವ ವ್ಯಕ್ತಿ ಮಾಹಿತಿ ಕೊಟ್ಟಿದ್ದಕ್ಕೆ ಹಲ್ಲೆಯಾಗಿದೆ. ಮುಸ್ಲಿಂ ಮತಾಂಧರಿಗೆ ಯಾವುದೇ ಭಯ ಇಲ್ಲ. ರಾಜ್ಯದಲ್ಲಿ ಸಿದ್ದರಾಮಯ್ಯ ಹಿಂದೂ ವಿರೋಧಿ ಸರ್ಕಾರ ನಡೆಸುತ್ತಿದ್ದಾರೆ. ತಪ್ಪಿತಸ್ಥರ ವಿರುದ್ಧ ಸರಿಯಾದ ಕ್ರಮ ತಗೆದುಕೊಳ್ಳದೆ ಹೋದರೆ ನಾವು ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.