ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಇತರೆ ಆರೋಪಿಗಳನ್ನು ಪೊಲೀಸರು ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ದರ್ಶನ್, ಪವಿತ್ರಾ ಸೇರಿದಂತೆ ಆರೋಪಿಗಳ ಆರು ದಿನದ ಪೊಲೀಸ್ ಕಸ್ಟಡಿ ಅಂತ್ಯವಾಗುತ್ತಿರುವ ಕಾರಣ ಒಂದು ದಿನ ಮುಂಚಿತವಾಗಿಯೇ ಪೊಲೀಸರು ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ವಿಚಾರಣೆಯ ನಂತರ ನ್ಯಾಯಾಧೀಶರು, 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದರು. ಅದಲ್ಲದೆ ಪವಿತ್ರಗೌಡ ನ್ಯಾಯದೀಶರ ಮುಂದೆ ಕಣ್ಣೀರು ಹಾಕಿದ್ದಾರೆ.
ಹೌದು ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಪವಿತ್ರಗೌಡ, ಎ೨ ದರ್ಶನ, ಎ೩ ಪವನ್, ಎ೪ ರಾಘವೇಂದ್ರ, ಎ೫ ನಂದೀಶ್, ಎ೬ ನಂದೀಶ್, ಎ೭ ಅನುಕುಮಾರ್, ಎ೧೦ವಿನಯ್ ,ಎ೧೨ಲಕ್ಷ್ಮಣ್,ಎ೧೩ದೀಪಕ್, ಎ೧೪ ಪ್ರದೋಶ್, ಎ೧೬ನಿಖಿಲ್ ಆರೋಪಿಗಳು ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ನೀಡಲಾಗಿದೆ. ವಿಚಾರಣೆ ಬಾಕಿ ಹಿನ್ನೆಲೆ 5 ದಿನ ದರ್ಶನ್ ಅಂಡ್ ಗ್ಯಾಂಗ್ ಪೊಲೀಸ್ ಕಸ್ಟಡಿಗೆ ನೀಡಲಾಗಿದ್ದು, ಜೂನ್ 20 ರವೆಗೆ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಲಾಗಿದೆ.
6 ತಿಂಗಳಲ್ಲಿ ನಿಮ್ಮ ಆದಾಯವನ್ನು ಹೆಚ್ಚಿಸುವ ಬೆಳ್ಳುಳ್ಳಿ ಬಗ್ಗೆ ಇಲ್ಲಿದೆ ಮಾಹಿತಿ.!
ಈ ವೇಳೆ ದರ್ಶನ್ ಪರ ವಕೀಲ ಅನಿಲ್ ಬಾಬು ವಾದ ಮಂಡಿಸಿ, ಆರೋಪಿಗಳಿಗೆ ವಿಚಾರಣೆ ವೇಳೆ ಹಿಂಸೆ ಕೊಟ್ಟಿದ್ದಾರೆ. ಮಹಿಳಾ ಆರೋಪಿ ಪವಿತ್ರಾ ಗೌಡಳನ್ನೂ 6 ದಿನ ವಿಚಾರಣೆ ನಡೆಸಲಾಗಿದೆ. ಎಲ್ಲದಕ್ಕೂ ದರ್ಶನ್ ಕಾರಣ ಎಂದರೆ ಹೇಗೆ? ವಿಚಾರಣೆ ಹಂತದಲ್ಲಿದ್ದಾಗಲೇ ದರ್ಶನ್ ಮೇಲೆ ಎಲ್ಲಾ ಅರೋಪಗಳನ್ನು ಮಾಡುವುದು ಎಷ್ಟು ಸರಿ? ಪವಿತ್ರಾ ಗೌಡ ಬಗ್ಗೆ ತುಂಬಾ ಕೆಟ್ಟದಾಗಿ ಬಿಂಬಿಸಲಾಗುತ್ತಿದೆ. ಆರೋಪಿಗಳ ಹೇಳಿಕೆಗಳೂ ಸೋರಿಕೆಯಾಗುತ್ತಿವೆ. ಹೀಗಾಗಿ ಮತ್ತೆ ಕಸ್ಟಡಿಗೆ ನೀಡುವುದು ಬೇಡ ಹೇಳಿದರು.
ಮತ್ತೊಂದೆಡೆ ಎಸ್ಪಿಪಿ ಪ್ರಸನ್ನ ಕುಮಾರ್ ವಾದ ಮುಂದುವರಿಸಿ, ರೇಣುಕಾಸ್ವಾಮಿಗೆ ಎಲೆಕ್ಟ್ರಿಕ್ ಶಾಕ್ ನೀಡಿ ಹಿಂಸೆ ನೀಡಲಾಗಿದೆ. ಆರೋಪಿಗಳು ಯಾವೆಲ್ಲಾ ಡಿವೈಸ್ ಬಳಿಸಿದ್ದಾರೋ, ಅವುಗಳನ್ನು ವಶಕ್ಕೆ ಪಡೆಯಬೇಕು. ಇದಕ್ಕೆ ಸಮಯಾವಕಾಶ ಬೇಕು. ಹೀಗಾಗಿ ಆರೋಪಿಗಳನ್ನು ಕಸ್ಟಡಿಗೆ ನೀಡುವಂತೆ ಮನವಿ ಮಾಡಿದರು.
ಈ ವೇಳೆ ಪವಿತ್ರಾ ಗೌಡ ಪರ ವಕೀಲ ನಾರಾಯಾಣಸ್ವಾಮಿ ಎಂಟ್ರಿಯಾಗಿ, ನನ್ನ ಕಕ್ಷಿದಾರರನ್ನು ಭೇಟಿ ಮಾಡಲು ಪೊಲೀಸರು ಅವಕಾಶ ಕೊಟ್ಟಿಲ್ಲ ಎಂದು ಅಸಮಾಧಾನ ಹೊರಹಾಕಿದರು. ವಾದ-ಪ್ರತಿವಾದ ಅಲಿಸಿದ ಬಳಿಕ ನ್ಯಾಯಾಧೀಶರು, ಆರೋಪಿಗಳನ್ನು ಮತ್ತೆ 5 ದಿನ ಪೊಲೀಸ್ ಕಸ್ಟಡಿಗೆ ನೀಡಲು ಸೂಚಿಸಿದರು.