ಬೆಂಗಳೂರು:- ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿದ ಕರ್ನಾಟಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.
ಗ್ಯಾರಂಟಿ ಖಜಾನೆ ತುಂಬಿಸಲು ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ.. ಬಿಜೆಪಿ ಆಕ್ರೋಶ!
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯೇರಿಕೆಯಿಂದ ರಾಜ್ಯ ಸರ್ಕಾರಕ್ಕೆ ವ್ಯಾಟ್ ರೂಪದಲ್ಲಿ ವರ್ಷಕ್ಕೆ 250 ಕೋಟಿ ರೂ. ಹೆಚ್ಚುವರಿ ಆದಾಯ ಸಿಗಲಿದೆ. ರಾಜ್ಯ ಹಣಕಾಸು ಇಲಾಖೆಯ ಮೂಲಗಳ ಪ್ರಕಾರ, ರಾಜ್ಯ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಸೇರಿದಂತೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ವ್ಯಾಟ್ ರೂಪದಲ್ಲಿ ವರ್ಷಕ್ಕೆ ರೂ. 9,500 ಕೋಟಿ ಆದಾಯವನ್ನು ಗಳಿಸುತ್ತದೆ. ಇದು ತಿಂಗಳಿಗೆ 800 ಕೋಟಿ ರೂ. ಆಗುತ್ತದೆ. ಇನ್ನು ಈಗ ಬೆಲೆಯೇರಿಕೆ ಮಾಡಿರುವುದರಿಂದ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ವರ್ಷಕ್ಕೆ 9,750 ಕೋಟಿ ರೂ. ಸಿಗಲಿದೆ ಎಂದು ತಿಳಿದುಬಂದಿದೆ
ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ರಾಜ್ಯ ಸರ್ಕಾರ ಹೆಚ್ಚಿಸಿದೆ. ಇದರಿಂದ ಒಂದು ಲೀಟರ್ ಡೀಸೆಲ್ಗೆ ರಾಜ್ಯದ ಜನ 89.20 ರೂ. ನೀಡಬೇಕಾದರೆ, ಲೀಟರ್ ಪೆಟ್ರೋಲ್ಗೆ 103 ಆಗಲಿದೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಪೆಟ್ರೋಲ್ಗೆ ರಾಜ್ಯ ಸರ್ಕಾರವು ಇದುವರೆಗೆ ಶೇ.25.92ರಷ್ಟು ಮಾರಾಟ ತೆರಿಗೆ ವಿಧಿಸುತ್ತಿತ್ತು. ಈಗ ಶೇ.3.9ರಷ್ಟು ಹೆಚ್ಚಳ ಮಾಡಿದ್ದು, ಇನ್ನು ಮುಂದೆ ಒಟ್ಟು ಶೇ.29.84ರಷ್ಟು ತೆರಿಗೆ ವಸೂಲಿ ಮಾಡಲಿದೆ. ಇನ್ನು ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಶೇ.4.1ರಷ್ಟು ಏರಿಕೆ ಮಾಡಲಾಗಿದ್ದು, ರಾಜ್ಯ ಸರ್ಕಾರ ಇನ್ನು ಶೇ.18.44ರಷ್ಟು ತೆರಿಗೆ ವಸೂಲಿ ಮಾಡಲಿದೆ