ಬೆಂಗಳೂರು: ಬರಗಾಲದಿಂದ ಬಳಲಿದ್ದ ರಾಜ್ಯಕ್ಕೆ ಉತ್ತಮ ಮುಂಗಾರಿನ ಆರಂಭವಾಗಿದೆ. ಈ ಮಳೆಯ ನೀರನ್ನ ಸಣ್ಣ ನೀರಾವರಿ ಕೆರೆಗಳು, ಬ್ಯಾರೇಜ್ ಮತ್ತು ಕಿಂಡಿ ಅಣೆಕಟ್ಟುಗಳಲ್ಲಿ ಸಮರ್ಪಕವಾಗಿ ಸಂಗ್ರಹಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ನೀರು ಸೋರಿಕೆಯಿಂದ ಪೋಲಾದರೆ ಸಂಬಂಧಪಟ್ಟ ಅಧಿಕಾರಿಗಳನ್ನು ಹೊಣೆಗಾರನ್ನಾಗಿಸುವುದಾಗಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಬೋಸರಾಜು ಖಡಕ್ ಸೂಚನೆ ನೀಡಿದರು.
ವಿಕಾಸ ಸೌಧದಲ್ಲಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ದಿ ಇಲಾಖೆಯ ಪ್ರಗತಿ ಪರಿಶೀಲನೆಯನ್ನು ನಡೆಸಿ, ಸಣ್ಣ ನೀರಾವರಿ ಇಲಾಖೆಯ ವ್ಯಾಪ್ತಿಯಲ್ಲಿ 3,685 ಕೆರೆಗಳಿವೆ. ವಿಭಾಗವಾರು ಸಣ್ಣ ನೀರಾವರಿ ಕೆರೆಗಳಲ್ಲಿನ ಪ್ರಸ್ತುತ ನೀರಿನ ಸಂಗ್ರಹ ಹಾಗೂ ಕೆರೆಗಳ ಸ್ಥಿತಿಗಳ ಬಗ್ಗೆ ಸಮಗ್ರ ಮಾಹಿತಿ ಪಡೆದುಕೊಂಡು ಅಧಿಕಾರಿಗಳಿಗೆ ಸೂಚನೆ ನೀಡಿದರು.
Father’s Day 2024: ಅಪ್ಪಂದಿರ ದಿನದ ಮಹತ್ವ ಪ್ರಾಮುಖ್ಯತೆ ಮತ್ತು ಇತಿಹಾಸ ತಿಳಿಯಿರಿ!
ಬರಗಾಲದಿಂದ ತತ್ತರಿಸಿದ್ದ ರಾಜ್ಯಕ್ಕೆ ಉತ್ತಮ ಮುಂಗಾರಿನ ಪ್ರವೇಶವಾಗಿದೆ. ಈ ನೀರಿನ ಸಮರ್ಪಕ ಸಂಗ್ರಹವನ್ನ ಮಾಡುವ ನಿಟ್ಟಿನಲ್ಲಿ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಆದ್ಯತೆ ನೀಡಬೇಕು. ಹೆಚ್ಚಿನ ಪ್ರಮಾಣದಲ್ಲಿ ನೀರು ಸಂಗ್ರಹವಾಗುವುದರಿಂದ ರೈತಾಪಿ ಜನರಿಗೆ ವರ್ಷ ಪೂರ್ತಿ ಅನುಕೂಲವಾಗುತ್ತದೆ.
ಇದನ್ನ ಗಮನದಲ್ಲಿಟ್ಟುಕೊಂಡು ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಯಾವುದೇ ರೀತಿಯಲ್ಲೂ ಕೆರೆಗಳು, ಬ್ಯಾರೇಜ್ ಮತ್ತು ಕಿಂಡಿ ಅಣೆಕಟ್ಟುಗಳಲ್ಲಿ ನೀರು ಸೋರಿಕೆ ಅಗಬಾರದು. ನೀರು ಸೋರಿಕೆಯಿಂದ ಪೋಲಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ನೀಡಿದರು.